ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ರಾಠೋಡ್ ಅವರನ್ನು ತಡರಾತ್ರಿ ಬಂಧಿಸಿದ್ದಾರೆ.

ಕೊಲೆಯತ್ನ ಆರೋಪದಡಿ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಬಿಜೆಪಿ ಮುಖಂಡನ ಬಂಧನವಾಗಿದೆ. ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಇರುವ ನಾಟಿ ಔಷಧಿ ವೈದ್ಯ ರಶೀದ್ ಮುತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ್ ಆಗ್ರಹಿಸಿದ್ದರು.
ಅಂತೆಯೇ ಮಣಿಕಂಠ ರಾಠೋಡ್, ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮಾ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ರಶೀದ್ ಮುತ್ಯಾ ಚಾಲಕನ ದೂರಿನ ಮೇರೆಗೆ ಬಂಧನವಾಗಿದೆ. ಮಣಿಕಂಠ್ ರಾಠೋಡ್ ವಿರುದ್ಧ ಕೊಲೆಯತ್ನ ಆರೋಪದಡಿ ದೂರು ದಾಖಲಾಗಿದೆ. ನೆಲೋಗಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ.

