ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವಿಜ್ರಂಭಣೆಯಿಂದ ಶ್ರದ್ಧಾಭಕ್ತಿಯೊಂದಿಗೆ ಜರಗಿತು.

ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ರಂಗಪೂಜೆ, ವೈದಿಕ ಮಂತ್ರಾಕ್ಷತೆ, ಶ್ರೀ ಕ್ಷೇತ್ರದ ದೈವಗಳಿಗೆ ನೇಮೋತ್ಸವ ನಡೆಯಿತು.
ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ನಾಗೇಶ್ ರಾವ್ ಅತ್ತಾಳ ಇವರಿಂದ ಹೂವಿನ ಅಲಂಕಾರ ಸೇವೆಯನ್ನು ಮಾಡಿಸಿದರು. ಇವರಿಗೆ ವ್ಯವಸ್ಥಾಪನ ಸಮಿತಿಯಿಂದ ಶಾಲು ಪ್ರಸಾದ ನೀಡಿದರು.
ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವರ ಸೇವೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದೇವಸ್ಥಾನದ ಬಳಿಯಲ್ಲಿಯೇ ಹಣ್ಣುಕಾಯಿ ಅಂಗಡಿ ಹಾಗೂ ಹರಕೆಯ ಬೆಳ್ಳಿ ಆಭರಣಗಳ ಅಂಗಡಿಯು ತೆರೆದು ಭಕ್ತಾದಿಗಳಿಗೆ ಅನುಕೂಲ ಕಲ್ಪಿಸಲಾಗಿತ್ತು.
ವರ್ಷಂಪ್ರತಿ ಶ್ರೀ ಕ್ಷೇತ್ರದಲ್ಲಿ ಗೊನೆ ಮುಹೂರ್ತದಿಂದ ಹಿಡಿದು ಷಷ್ಠಿ ಮಹೋತ್ಸವದ ತನಕ ಶ್ರೀ ದೇವರ ಸನ್ನಿಧಿಯಲ್ಲಿ ಶ್ರದ್ಧಾಭಕ್ತಿಯ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿoದ ನಡೆಯಿತು.
ಪ್ರತೀ ವರ್ಷದಂತೆ ಷಷ್ಠಿ ಮಹೋತ್ಸವ ಕಾರ್ಯಕ್ರಮಗಳಲ್ಲಿ ಸಹಸ್ರಾರು ಭಕ್ತಾಭಿಮಾನಿಗಳ ಒಗ್ಗೂಡುವಿಕೆಯಿಂದ ಯಶಸ್ವಿಯಾಗಿ ನಡೆದು ಬಂದಿದೆ. ಶ್ರೀ ಕ್ಷೇತ್ರದಲ್ಲಿ ಅನ್ನಪ್ರಸಾದವು ಅಕ್ಷಯ ಪ್ರಸಾದದಂತೆ ಮೂಡಿ ಬಂದಿದೆ.



