ಉಳ್ಳಾಲ ವಲಯ ಬಿಲ್ಲವರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ, ಗುರು–ಗಾಂಧಿ ಸಂವಾದದ 100ನೇ ವರ್ಷದ ಅಂಗವಾಗಿ ‘ಶತಮಾನದ ಮಹಾಪ್ರಸ್ಥಾನ – ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಾ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ’ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಬಿಲ್ಲವ ಸೇವಾ ಸಮಾಜ (ರಿ.) ಕೊಲ್ಯ–ಸೋಮೇಶ್ವರ ಸಭಾಂಗಣದಲ್ಲಿ ಜರಗಿತು.


ಸಮಾರಂಭದ ಅಧ್ಯಕ್ಷತೆಯನ್ನು ಉಳ್ಳಾಲ ವಲಯ ಬಿಲ್ಲವರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಕೆ.ಟಿ. ಸುವರ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶತಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಶ್ರೀ ಸತೀಶ್ ಕುಂಪಲ, ಗುರು–ಗಾಂಧಿ ಸಂವಾದ ಶತಮಾನೋತ್ಸವ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ರಕ್ಷಿತ್ ಶಿವರಾಂ, ಶ್ರೀ ನಾಗಬ್ರಹ್ಮ ದೇವಸ್ಥಾನದ ಆಡಳಿತ ಮೊಕೇಸರ ಶ್ರೀ ಭಾಸ್ಕರ ಐತಾಳ್, ಬಂಟರ ಸಂಘ (ರಿ.) ಉಳ್ಳಾಲ ವಲಯದ ಅಧ್ಯಕ್ಷ ಶ್ರೀ ರವೀಂದ್ರ ರೈ ಕಲ್ಲಿಮಾರ್ ಸೇರಿದಂತೆ ಹಲವು ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಶುಭ ಹಾರೈಸಿದರು.

ಮೊಗವೀರ, ತೀಯ, ಗಾಣಿಗ, ಪದ್ಮಶಾಲಿ, ಬಂಟ, ಕುಲಾಲ ಮುಂತಾದ ವಿವಿಧ ಸಮಾಜಗಳ ಪ್ರತಿನಿಧಿಗಳು ಹಾಗೂ ಶ್ರೀ ನಾರಾಯಣಗುರು ಅಧ್ಯಯನಪೀಠದ ನಿರ್ದೇಶಕ ಡಾ. ಜಯರಾಜ್ ಎನ್., ಸದಸ್ಯರಾದ ಶ್ರೀ ಸತೀಶ್ ಕರ್ಕೇರ, ಶ್ರೀ ಮೋಹನ್‌ರಾಜ್ ಕೆ.ಆರ್, ಶ್ರೀಮತಿ ನಮಿತಾ ಶ್ಯಾಂ ಮೊದಲಾದವರು ಉಪಸ್ಥಿತರಿದ್ದರು.

ಸಮಾರಂಭವನ್ನು ಬಿಲ್ಲವ ಸೇವಾ ಸಮಾಜ ಕೊಲ್ಯ ಅಧ್ಯಕ್ಷ ಶ್ರೀ ವೇಣುಗೋಪಾಲ ಕೊಲ್ಯ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಕೊಣಾಜೆ ಅಧ್ಯಕ್ಷ ಶ್ರೀ ವಿಜೇತ್ ಪಜೀರು ಸಂಯೋಜಿಸಿದರು.
ಉಳ್ಳಾಲ ವಲಯ ಸಮಿತಿ ಹಾಗೂ ಎಲ್ಲಾ ಬಿಲ್ಲವ ಸಂಘಗಳ ಅಧ್ಯಕ್ಷರು, ಸಂಚಾಲಕರು ಮತ್ತು ಸದಸ್ಯರು ಭಾಗವಹಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.




