Site icon Ullalavani

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಉಳ್ಳಾಲ;ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೆಟ್ ಪ್ರದಾನ ರಾಜಭವನದಲ್ಲಿ ನಡೆಯಿತು.

ಬೆಂಗಳೂರು ವಿ.ವಿಯ ಕುಲಾದಿಪತಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ವಿ.ವಿ ಉಪಕುಲಪತಿ ಡಾ| ಜಯಕರ ಎಸ್.ಎಂ ಕುಲಸಚಿವೆ ಕೆ.ಟಿ ಶಾಂತಾಳಾ ಮತ್ತಿತರರು ಉಪಸ್ಥಿತರಿದ್ದರು.

ಬಿಎ, ಎಲ್.ಎಲ್.ಬಿ ಪದವೀಧರರಾಗಿರುವ ಅವರು ಉಳ್ಳಾಲದ ಮಾಜಿ ಶಾಸಕ ದಿ| ಯು.ಟಿ.ಫರೀದ್ ಅವರ ಪುತ್ರ. ಎನ್.ಎಸ್.ಯು.ಐ ಯುವ ಕಾಂಗ್ರೆಸ್ ಹಾಗೂ ಸೇವಾದಳಗಳ ಮೂಲಕ ಸಾರ್ವಜನಿಕರ ಜೀವನ ಪ್ರವೇಶಿಸಿದ ಖಾದರ್ ಅವರು ಮಂಗಳೂರು ವಿಧಾನ ಸಭಾ ಕ್ಷೇತ್ರವನ್ನು ಸತತ ಐದು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ.

ರಾಜ್ಯ ಸರಕಾರದಲ್ಲಿ ಆರೋಗ್ಯ, ಆಹಾರ, ವಸತಿ ಹಾಗೂ ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಉಪ ನಾಯಕರಾಗಿದ್ದ ಅವರು 2023ರಿಂದ ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Exit mobile version