Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಉಳ್ಳಾಲದಲ್ಲಿ ಸರಕಾರಿ ತಾಲೂಕು ಆಸ್ಪತ್ರೆ ಸ್ಥಾಪನೆ ಯಾವಾಗ ?ಶಾಸಕರು ಉತ್ತರಿಸಲಿ- ಸಂತೋಷ್ ಬಜಾಲ್

UllalaVaniBy UllalaVaniNovember 29, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮುಡಿಪು: ನಾಲ್ಕೈದು ಖಾಸಗೀ ಮೆಡಿಕಲ್ ಕಾಲೇಜುಗಳಿರುವ ಉಳ್ಳಾಲ ತಾಲೂಕಲ್ಲಿ ವೈದ್ಯಕೀಯ ಅಧಿನಿಯಮದ ಪ್ರಕಾರ ಒಂದು ಸರಕಾರಿ ತಾಲೂಕು ಆಸ್ಪತ್ರೆ ನಿರ್ಮಿಸಲು ಸಾಧ್ಯವಾಗದಿರೋದು ಸ್ಥಳೀಯ ಶಾಸಕರ ಇಚ್ಛಾಶಕ್ತಿಯ ಕೊರತೆ. ಜನಪ್ರತಿನಿಧಿಯ ಬೇಜವಾಬ್ದಾರಿ ನಡೆಯಿಂದ ತಾಲೂಕಿನ ಜನತೆ ಸರಕಾರಿ ಆಸ್ಪತ್ರೆಗಳಿಂದ ವಂಚಿತರಾಗಿದ್ದಾರೆ.



ಉಳ್ಳಾಲದಲ್ಲಿ ಸರಕಾರಿ ತಾಲೂಕು ಆಸ್ಪತ್ರೆ ನಿರ್ಮಿಸಲು ಇನ್ನೆಷ್ಟು ಸಮಯ ಬೇಕೆಂದು ಶಾಸಕರು ಉತ್ತರಿಸಲಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಡಿವೈಎಫ್ಐ ಮುಡಿಪು ವಲಯ ಸಮಿತಿ ನೇತೃತ್ವದಲ್ಲಿ ಉಳ್ಳಾಲದಲ್ಲಿ 100 ಬೆಡ್ ಗಳ ತಾಲೂಕು ಆಸ್ಪತ್ರೆಗಳ ಸಹಿತ ಮುಡಿಪುಗೆ ಸಮುದಾಯ ಆಸ್ಪತ್ರೆ ಸಹಿತ ಜನಸಂಖ್ಯೆಗೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಗೂ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು, ಕಿದ್ವಾಯಿ, ಜಯದೇವ ಸರಕಾರಿ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪಿಸಲು ಒತ್ತಾಯಿಸಿ ಮುಡಿಪು ಜಂಕ್ಷನ್ ಬಳಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಸರಕಾರಿ ಆಸ್ಪತ್ರೆಯ ಕಡೆಗಣನೆಯಿಂದ ಖಾಸಗೀ ಆಸ್ಪತ್ರೆಗಳು ಚಿಕಿತ್ಸೆಯ ಹೆಸರಲ್ಲಿ ಜನಸಾಮಾನ್ಯರ ಸುಲಿಗೆ ನಡೆಸುತ್ತಿದೆ. ಸಣ್ಣ ಪುಟ್ಟ ರೋಗಗಳಿಗೂ ಅನಗತ್ಯ ಪರೀಕ್ಷೆ ನಡೆಸುವುದಲ್ಲದೇ ಒಂದೇ ಬಗೆಯ ಚಿಕಿತ್ಸೆಗೆ ನಗರದ ಖಾಸಗೀ ಆಸ್ಪತ್ರೆಗಳೆಲ್ಲವೂ ವಿಧ ವಿಧ ದರಗಳನ್ನು ವಿಧಿಸುತ್ತಿರುವುದು ಸರಕಾರದ ವೈದ್ಯಕೀಯ ಅಧಿನಿಯಮದ ಸ್ಪಷ್ಟ ಉಲ್ಲಂಘನೆಯಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಸೇವಾ ನಿಯಂತ್ರಣ ಪ್ರಾಧಿಕಾರವನ್ನು ಜಿಲ್ಲಾಡಳಿತ ಈವೆರೆಗೂ ರಚಿಸಿಲ್ಲ ಅಲ್ಲದೇ ಒಂದೇ ಒಂದು ಸಭೆ ಕರೆಯದೆ ಖಾಸಗೀ ಆಸ್ಪತ್ರೆಗಳ ಪರವಾದ ನೀತಿಯನ್ನು ಅನುಸರಿಸಿರೋದು ಖಂಡನೀಯ.

ಜಿಲ್ಲೆಯಲ್ಲಿರುವ ಸರಕಾರಿ ಆಸ್ಪತ್ರೆಗಳು ನುರಿತ ವೈದ್ಯರ ಸಹಿತ ಎಲ್ಲಾ ಬಗೆಯ ಮೂಲಭೂತ ಸೌಕರ್ಯಗಳಿಂದ ವಂಚನೆಗೊಳಗಾಗಿದೆ. ಒಮ್ಮೆ ಅಂಕೆಸಂಖ್ಯೆಗಳನ್ನು ಗಮನಿಸಿದರೆ ಒಟ್ಟು ಜಿಲ್ಲೆಯಲ್ಲಿ 541 ಸರಕಾರಿ ಆಸ್ಪತ್ರೆಗಳಿವೆ ಅವುಗಳಲ್ಲಿ ಪ್ರಾಥಮಿಕ ಆರೋಗ್ಯ ಉಪಕೇಂದ್ರಗಳಿಂದ ಹಿಡಿದು ಜಿಲ್ಲಾಸ್ಪತ್ರೆಗಳ ವರೆಗೂ ಸೇರಿವೆ. ಇಷ್ಟು ಆಸ್ಪತ್ರೆಗಳಲ್ಲಿ ಸರಕಾರಿ ವೈದ್ಯರಿರೋದು ಕೇವಲ 141 ಅಷ್ಟೇ. ಇಷ್ಟೊಂದು ಅಗಾಧ ಪ್ರಮಾಣದಲ್ಲಿ ವೈದ್ಯರ ಕೊರತೆಗಳು ಸರಕಾರಿ ಆಸ್ಪತ್ರೆಗಳಲ್ಲಿವೆ ಅದೂ ಕೂಡ ಪ್ರತೀ ವರುಷ 12864 ವೈದ್ಯರನ್ನು ಸೃಷ್ಟಿ ಮಾಡುವ ಜಿಲ್ಲೆಯಲ್ಲಿ ಎಂತಹ ದುರಂತ ಅಲ್ಲವೇ ಎಂದರು. ಆಳುವ ಸರಕಾರ ಇನ್ನಾದರೂ ಎಚ್ಚೆತ್ತುಕೊಳ್ಳಲಿ ಜಿಲ್ಲೆಯಲ್ಲಿ ಹೆಚ್ಚೆಚ್ಚು ಸರಕಾರಿ ಆಸ್ಪತ್ರೆಗಳನ್ನು ಸ್ಥಾಪಿಸಿ ಇರುವ ಆಸ್ಪತ್ರೆಗಳಿಗೆ ಮೂಲಭೂತ ಸೌಕರ್ಯಗಳ ಒದಗಿಸಿಕೊಡಬೇಕು. ಪಿಪಿಪಿ ಮಾದರಿಯನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ದ.ಕ ಜಿಲ್ಲೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸರಕಾರಿ ಆಸ್ಪತ್ರೆಗಳು ಸ್ಥಾಪನೆಗೊಳ್ಳಲೇ ಬೇಕು. ಪ್ರತೀ ತಾಲೂಕಿಗೆ ತಾಲೂಕು ಆಸ್ಪತ್ರೆ ಸಹಿತ ಸರಕಾರ ಕ್ಯಾನ್ಸರ್ ಚಿಕಿತ್ಸೆಗೆ ಕಿದ್ವಾಯಿ, ಹೃದ್ರೋಗ ಕಾಯಿಲೆಗೆ ಜಯದೇವ ಆಸ್ಪತ್ರೆ ಘಟಕಗಳನ್ನು ಈ ಜಿಲ್ಲೆಯಲ್ಲೂ ಕೂಡಲೇ ಸ್ಥಾಪಿಸಲು ಕ್ರಮಕೈಗೊಳ್ಳಬೇಕು ಹಾಗು ಸರಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕೆಂದು ಡಿವೈಎಫ್ಐ ನಿರಂತರ ಹೋರಾಟಗಳನ್ನು ಹಮ್ಮಿಕೊಂಡಿದೆ.

ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ ಮಾತನಾಡಿ ಬಡವರ ಮನೆಯ ಮಕ್ಕಳಿಗೆ ವೈದ್ಯರಾಗಲು ಕನಿಷ್ಟ ಸರಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಈವರೆಗೂ ಸಾಧ್ಯವಾಗಿಲ್ಲ‌. ಉಳ್ಳಾಲದಲ್ಲಿ ಸರಕಾರಿ ತಾಲೂಕು ಆಸ್ಪತ್ರೆ ಆಗುವವರೆಗೂ ಡಿವೈಎಫ್ಐ ಚಳುವಳಿ ತೀವೃಗೊಳ್ಳಲಿದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಉಪಾಧ್ಯಕ್ಷ ಅಶ್ರಫ್ ಹರೇಕಳ,ಮುಖಂಡರಾದ ರಫೀಕ್ ಹರೇಕಳ,ಬಶೀರ್ ಲಚ್ಚಿಲ್,ಇಬ್ರಾಹಿಂ ಮದಕ,ನೌಶಾದ್ ಕುರ್ನಾಡು,ಇರ್ಫಾನ್ ಇರಾ,ಫಾರೂಕ್ ಕೊಣಾಜೆ,ಅಬೂಬಕರ್ ಜಲ್ಲಿ ಉಪಸ್ಥಿತರಿದ್ದರು.

ಡಿವೈಎಫ್ಐ ಮುಡಿಪು ಘಟಕ ಕಾರ್ಯದರ್ಶಿ ರಝಾಕ್ ಮುಡಿಪು ಸ್ವಾಗತಿಸಿ ವಂದಿಸಿದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

By UllalaVaniFebruary 4, 20260

ದೇರಳಕಟ್ಟೆ : ಧನಾತ್ಮಕ ಚಿಂತನೆಯೊAದಿಗೆ ಕೆನರಾ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ಅಪಾರ ಸಂತೋಷ ಮತ್ತು ಗೌರವದ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026
1 2 3 … 1,792 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d