Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಜಮೀನು ಒದಗಿಸುವ ಭರವಸೆ ನೀಡಿದ ಸಿಎಂ

UllalaVaniBy UllalaVaniDecember 3, 2025Updated:December 3, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಡಿ.3: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿವಗಿರಿ ಮಠದಿಂದ ಮನವಿ ಮಾಡಿದಂತೆ ಐದು ಎಕರೆ ಭೂಮಿಗೆ ಬಿ.ಕೆ.ಹರಿಪ್ರಸಾದ್ ಮತ್ತು ಇತರ ನಾಯಕರು ಭೂಮಿ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಬಗ್ಗೆ ಪ್ರಧಾನ ಸಂದೇಶ ಭಾಷಣ ಮಾಡಿದ ಲೋಕಸಭೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಕೆ. ಸಿ. ವೇಣುಗೋಪಾಲ್, ಮಹಾತ್ಮ ಗಾಂಧಿ, ಬಸವಣ್ಣ, ನಾರಾಯಣ ಗುರು ತತ್ವಗಳು ದೇಶದ ಸಂವಿಧಾನದಲ್ಲಿ ಅಡಕವಾಗಿವೆ. ಇಂಥ ಮಹಾನ್ ಸಂವಿಧಾನವೇ ಈಗ ಬೆದರಿಕೆ ಎದುರಿಸುತ್ತಿದೆ, ಗಾಂಧಿ, ಗುರುಗಳು ದಶಕಗಳ ಹಿಂದೆ ಎದುರಿಸಿದ ಬೆದರಿಕೆಯಂತೆಯೇ ಸಂವಿಧಾನ ಬೆದರಿಕೆ ಎದುರಿಸುತ್ತಿರುವುದು ದುರದೃಷ್ಟ ಈ ಮಹಾನ್ ನಾಯಕರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಮುಂದುವರಿಯಬೇಕಿದೆ ಎಂದರು.

ಒಂದೇ ದೇಶ ಒಂದೇ ಮತ ಒಂದೇ ದೇವರು ಎಂಬ ಸಿದ್ಧಾಂತ ಪಸರಿಸಿದವರು ನಾರಾಯಣ ಗುರುಗಳು. ಸತ್ಯ ಅಹಿಂಸೆಯ ಸಂದೇಶ ಗಾಂಧಿ ಅವರದು. 1925ರಲ್ಲಿ ಈ ಇಬ್ಬರು ಮಹಾನ್ ನಾಯಕರು ಸಂವಾದ ನಡೆಸಿದ್ದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ಆ ಕಾಲದಲ್ಲಿ ಒಂದೆಡೆ ಸ್ವಾತಂತ್ರ್ಯ ಹೋರಾಟ ಇದ್ದರೆ ಇನ್ನೊಂದೆಡೆ ಅಸ್ಪೃಶ್ಯತೆ, ಅಸಮಾನತೆ ತಾಂಡವ ಆಡುತಿತ್ತು. ಈ ಸಂವಾದ ದೇಶದ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿತ್ತು ಎಂದು ಹೇಳಿದರು.ಗಾಂಥಿ- ಗುರುಗಳ ಈ ಐತಿಹಾಸಿಕ ಸಂವಾದದಿಂದ ಸುದೀರ್ಘ ವೈಕಂ ಸತ್ಯಾಗ್ರಹಕ್ಕೆ ಕಾರಣವಾಯಿತು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಇತಿಹಾಸವನ್ನು ಭವಿಷ್ಯಕ್ಕೆ ತಿಳಿಸುವ ಈ ಕಾರ್ಯಕ್ರಮ ನಡೆದ ಈ ಮೈದಾನಕ್ಕೆ ಗುರು-ಗಾಂಧಿ ಮೈದಾನ ಎಂದು ನಾಮಕರಣಗೊಳಿಸಿ ಪಾರ್ಕ್, ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರುನನ್ನ ಪ್ರಕಾರ ಅಭಿವೃದ್ಧಿ ಎಂದರೆ ರಸ್ತೆ ಸೇತುವೆ ನಿರ್ಮಾಣ ಮಾತ್ರ ಅಲ್ಲ ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಮ್, ದಲಿತರು, ಕ್ರೈಸ್ತರು, ಶ್ರೀಮಂತರು, ಶೋಷಿತರ ಮಕ್ಕಳು ಕೈ ಕೈ ಹಿಡಿದು ಜೊತೆಯಾಗಿ ಸಾಗುವ ವಾತಾವರಣ ನಿರ್ಮಾಣ ಅದಾಗ ಅಭಿವೃದ್ಧಿ ಆದಂತೆ ಎಂದವರು ಹೇಳಿದರು.

ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾತನಾಡಿದ ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, 2013ರಲ್ಲಿ ಮಂಗಳೂರು ವಿವಿಯಲ್ಲಿ ನಾರಾಯಣ ಗುರುಗಳ ಪೀಠ ಸ್ಥಾಪನೆಗೆ ಮನವಿ ಮಾಡಿ ಹಿಂದುಳಿದ ನಾಯಕರು ಮುಂದೆ ಬಂದು ನಾರಾಯಣ ಗುರು ಪೀಠ ಸ್ಥಾಪನೆಗೆ ಮುಂದಾದ ಸಂದರ್ಭ ನನ್ನ ಎಂಎಲ್ಸಿ ನಿಧಿಯಿಂದ 35 ಲಕ್ಷ ರೂ. ಒದಗಿಸಿದ್ದೆ. ಸಂಸದರಾಗಿದ್ದ ಸಂದರ್ಭ ನಳಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಹರೀಶ್ ಕುಮಾರ್ ತಲಾ 10 ಲಕ್ಷ ರೂ. ಅನುದಾನ ಒದಗಿಸಿದ್ದರು. ಅಧ್ಯಯನ ಪೀಠದ ಕಾರ್ಯಕ್ಕೆ ಇನ್ನಷ್ಟು ಅನುದಾನ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದಾಗ ಎರಡು ಕೋಟಿ ರೂ. ಅನುದಾನ ಒದಗಿಸಿದ್ದರು. ಇದೀಗ ಶಿವಗಿರಿ ಮಠದ ಶಾಖೆ ಸ್ಥಾಪಿಸಲು ಐದು ಎಕರೆ ಜಾಗ ಗುರುತಿಸುವಂತೆ ಮುಖ್ಯ ಮಂತ್ರಿ ಹೇಳಿದ್ದಾರೆ ಎಂದರು.

ಜಮೀನು ಒದಗಿಸಲು ಸ್ವಾಮೀಜಿ ಮನವಿ

ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಶಿವಗಿರಿ ಮಠದ ಶಾಖೆಯನ್ನು ಕರ್ನಾಟಕದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಆದ್ಯತೆ ನೀಡಿ ಅಗತ್ಯ ಭೂಮಿಯನ್ನು ಒದಗಿಸಬೇಕು ಎಂದು ಮನವಿ ಮಾಡಿದರು.

ಬಳಿಕ ಮಠದ ವತಿಯಿಂದ ಮನವಿ ಪತ್ರವನ್ನು ಕೆ.ವೇಣುಗೋಪಾಲ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶಿವಗಿರಿ ಮಠದ ಕಾರ್ಯದರ್ಶಿ ಶುಭಗಾನಂದ ಸ್ವಾಮೀಜಿ, ಗೃಹಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿ ಮತ್ತು ವಕ್ಸ್ ಸಚಿವ ಝಮೀರ್ ಅಹ್ಮದ್, ಮಾಜಿ ಸಚಿವ ಜನಾರ್ದನ ಪೂಜಾರಿ. ಶಾಸಕರಾದ ಅಶೋಕ್ ರೈ ಹರೀಶ್ ಪೂಂಜಾ, ರಾಜೇಶ್ ನಾಯ್ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾಂಗ್ರೆಸ್ ನಾಯಕರಾದ ಹರೀಶ್ ಕುಮಾರ್, ಪಿವಿ ಮೋಹನ್, ಎಂ.ಎ.ಗಫೂರ್, ಪದ್ಮರಾಜ್, ರಕ್ಷಿತ್ ಶಿವರಾಂ, ಪ್ರತಿಭಾ ಕುಳಾಯಿ, ವಿಶ್ವಾಸ್ ಕುಮಾರ್ ದಾಸ್, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಸ್ವಾಗತಿಸಿದರು.


Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ

February 3, 2026

ತೀವ್ರ ರಕ್ತದೊತ್ತಡ ಸಿಎಆರ್ ಸಿಬ್ಬಂದಿ ನಿಧನ…!

February 3, 2026

Comments are closed.

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ

ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
Now Playing
ಮಹಿಷಾಸುರನ್ ಕೆರ್ನಗ ದೇವಿಗ್ ಬೇಜಾರ್..??
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ.. ಸ್ವರ್ಗದತ್ತ ಮಹಿಷಾ ...
ಮಹಿಷಾಸುರನ ಜೊತೆ ತಾಯಿ 9 ದಿನ ಯುದ್ಧ ಮಾಡಿದ ಕಾರಣವೇ ರೋಚಕ..

ಸ್ವರ್ಗದತ್ತ ಮಹಿಷಾ ಹೋಗಲು ಇದೇ ಕಾರಣ; ಕಟೀಲು ಅಸ್ರಣ್ಣರಿಂದ ಅದ್ಭುತ ವಿವರಣೆ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d