ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರಿಡೋತ್ಸವ ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.


ಕೋಣಾಜೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪುನೀತ್ ಗಾವ್0ಕರ್ ಕ್ರಿಡೋತ್ಸವವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಪಠ್ಯ ಮತ್ತು ಪಠಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನಿಮ್ಮ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯ ಎಂದರು ಅದರಲ್ಲೂ ಕ್ರೀಡೆಯು ನಿಮ್ಮಲ್ಲಿ ಮಾನಸಿಕ, ದೈಹಿಕವಾಗಿ ಸದೃಢವಾಗಲು ಸಹಕಾರಿಯಾಗುತ್ತದೆ ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂಧರ್ಭ ಕೋಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗೀತಾ ದಾಮೋದರ್, ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಲಾ ವಿದ್ಯಾರ್ಥಿ ನಾಯಕ ಭವಿತ್ ಸುವರ್ಣ ಉಪಸ್ಥಿತರಿದ್ದರು ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಆರ್ ಶೆಟ್ಟಿ ಸ್ವಾಗತಿಸಿ,ಶಾಲಾ ಮುಖ್ಯ್ಯೊಪಾಧ್ಯಾಯಾರು ನಯೀಮ್ ಹಮೀದ್ ವಂದನಾರ್ಪಣೆ ಗೈದರು ಶಿಕ್ಷಕರಾದ ರಮೇಶ್ ಪೆರಾಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯು ಈ ವರ್ಷ ರಜತ ಮಹೋತ್ಸವವನ್ನು ಆಚರಿಸುವುದರಿಂದ ವಿದ್ಯಾರ್ಥಿಗಳ ಪೋಷಕರಿಗೂ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿತ್ತು ಪೋಷಕರು ಬಹಳ ಖುಷಿಯಿಂದ ಕ್ರೀಡಾ ಸ್ಪೆರ್ದೆಯಲ್ಲಿ ಭಾಗವಹಿಸಿದರು.




