Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಕರಾವಳಿಯ ಜಾನಪದ ಕ್ರೀಡೆ `ಕಂಬಳ’ದ ಮೇಲೆ ಜಿಲ್ಲಾಡಳಿತದ ಹದ್ದಿನ ಕಣ್ಣು; ಮೈಕ್ ಬಹುತೇಕ ಬಂದ್ ಸಾಧ್ಯತೆ….!!

UllalaVaniBy UllalaVaniDecember 5, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು;ಕoಬಳ ಕ್ರೀಡೆ ಕೇವಲ ಕರಾವಳಿಯ ಜಾನಪದ ಕ್ರೀಡೆ ಮಾತ್ರವಲ್ಲ. ಇದೊಂದು ಕರಾವಳಿಯ ಘನತೆ, ಪ್ರತಿಷ್ಠೆಯ ಪ್ರತಿಬಿಂಬ. ಅಂತಹ ಕಂಬಳದ ಮೇಲೆ ಈ ಬಾರಿ ಜಿಲ್ಲಾಡಳಿತದ ವಿವಿಧ ಇಲಾಖೆಗಳು ಹದ್ದಿನ ಕಣ್ಣು ಇಟ್ಟಿವೆ. ಪ್ರತೀ ಶನಿವಾರ/ರವಿವಾರ ನಡೆಯುತ್ತಿರುವ ಕಂಬಳದ ಸ್ಥಳಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳೇ ಖುದ್ದು ಹಾಜರಾಗಿ ವರದಿ ರೆಡಿ ಮಾಡುತ್ತಿದ್ದಾರೆ.

“ಕಂಬಳದಲ್ಲಿ ಪ್ರಾಣಿಗಳಿಗೆ ಹಿಂಸೆ ನೀಡಲಾಗುತ್ತಿದೆ’ ಎಂಬ ಆರೋಪ ಇಟ್ಟುಕೊಂಡು ಈ ಹಿಂದೆ ಪೆಟಾ ಸಂಸ್ಥೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಹೀಗಾಗಿ ಯಾವುದೇ ಹಿಂಸೆ ಆಗದಂತೆ ಎಚ್ಚರ ವಹಿಸುವಂತೆ ನ್ಯಾಯಾಲಯ ಸೂಚಿಸಿದ ಆಧಾರದಲ್ಲಿ ಸದ್ಯ ಕಂಬಳಗಳು ಯಶಸ್ವಿಯಾಗಿ ನಡೆಯುತ್ತಿವೆ. ಈ ಋತುವಿನಲ್ಲಿ 3 ಕಂಬಳಗಳು ನಿಯಮ ಹಾಗೂ ಸಮಯಬದ್ಧವಾಗಿ ನಡೆದಿದೆ.

ಪ್ರಸಕ್ತ ನಡೆಯುತ್ತಿರುವ ಎಲ್ಲ ಕಂಬಳಗಳಿಗೆ ಪೊಲೀನ್, ಪಶುಪಾಲನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಆಗಮಿಸಿ ವರದಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ವರದಿ ನೀಡುತ್ತಿದ್ದಾರೆ. ಬೆಟ್ಟಿಂಗ್ ಸಹಿತ ಯಾವುದೇ ಕಾನೂನುಬಾಹಿರ ಚಟುವಟಿಕೆ ನಡೆಯದಂತೆ ಪೊಲೀಸ್ ಇಲಾಖೆ ನಿಗಾ ವಹಿಸುತ್ತಿದ್ದು, 3 ವರ್ಷದ ಒಳಗಿನ ಕೋಣಗಳ ಓಟ ನಡೆಸದಂತೆ ಹಾಗೂ ಯಾವುದೇ ಕೋಣಗಳಿಗೆ ಹಿಂಸೆ ಆಗದಂತೆ ನೋಡಿಕೊಳ್ಳಲು ಪಶುಪಾಲನ ಇಲಾಖೆ ಅಧಿಕಾರಿಗಳು ನಿಗಾ ವಹಿಸುತ್ತಿದ್ದಾರೆ. ಸ್ಥಳದಲ್ಲಿ ಇತರ ಯಾವುದೇ ನಿಯಮಾವಳಿ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ತಹಶೀಲ್ದಾರ್ ಅಧೀನದ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸುತ್ತಿದ್ದಾರೆ.

ಕಂಬಳ ಅಸೋಸಿಯೇಶನ್ ಕಾರ್ಯದರ್ಶಿ ವಿಜಯ್ ಕುಮಾರ್ ಕಂಗಿನಮನೆ “ಉದಯವಾಣಿ’ ಜತೆಗೆ ಮಾತನಾಡಿ ‘ಕಂಬಳಕ್ಕೆ ಯಾವುದೇ ಕಾರಣಕ್ಕೂ ಮುಂದೆ ಸಮಸ್ಯೆ ಆಗಬಾರದು ಎಂಬ ನೆಲೆಯಲ್ಲಿ ಸರ್ವರೂ ಅತ್ಯಂತ ಎಚ್ಚರಿಕೆಯಿಂದ ಉಸ್ತುವಾರಿ ನೋಡಿಕೊಳ್ಳುತ್ತಿದ್ದೇವೆ. ಯಾವುದೇ ಸಮಸ್ಯೆ ಆದರೂ ಕಂಬಳಕ್ಕೆ ಮತ್ತೆ ನಿಷೇಧದ ತೂಗುಗತ್ತಿ ಎದುರಾಗಲೂ ಬಹುದು. ಅದಕ್ಕೆ ನಾವು ಕಾರಣರಾಗಬಾರದು. ನಿಗದಿತ ಸಮಯಕ್ಕೆ ಕಂಬಳ ಆಯೋಜಿಸಿ ಯಾವುದೇ ಹಿಂಸೆ ಇಲ್ಲದೆ ಕೋಗಾಗಳ ಓಟದ ಗತ್ತು ನೋಡುವ ಭಾಗ್ಯ ಎಲ್ಲರಿಗೂ ದೊರೆಯುವಂತಾಗಬೇಕು” ಎಂದರು.

`ಮೈಕ್ ಬಹುತೇಕ ಬಂದ್..!’

ರಾತ್ರಿ ಹಗಲು ಕಂಬಳ ಆಯೋಜನೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾತ್ರಿ 10.30 ಗಂಟೆಯ ಬಳಿಕ ಮುಂಜಾನೆದರೆಗೆ ದೊಡ್ಡ ಮಟ್ಟದಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿಲ್ಲ ಕಂಬಳ ಆಯೋಜನೆ ಆಗುವ ಪರಿಸರದ ನಿವಾಸಿಗಳಿಗೆ ಯಾವುದೇ ಸಮಸ್ಯೆ/ಆಕ್ಷೇಪ ಆಗದಂತೆ ಎಚ್ಚರ ವಹಿಸುತ್ತ ರಾತ್ರಿ 10:30ರ ಬಳಿಕ ಕೇವಲ ಕಂಬಳ ಕರೆಯಲ್ಲಿ ಮಾತ್ರ ಸಣ್ಣ ಸ್ವರದೊಂದಿಗೆ ಮೈಕ್ ಬಳಕೆ ಸದ್ಯ ನಡೆಯುತ್ತಿದೆ. ಉಳಿದಂತೆ ವೇದಿಕೆ ಸಹಿತ ಇತರ ಭಾಗದಲ್ಲಿ ಬಳಕೆಯಾಗುವ ಧ್ವನಿವರ್ಧಕ ಸಂಪೂರ್ಣ ಬಂದ್ ಮಾಡಲಾಗುತ್ತಿದೆ ಎಂದು ಕಂಬಳ ಸಂಘಟಕರು ತಿಳಿಸಿದ್ದಾರೆ.

`ಪ್ರತೀ ಕಂಬಳದಲ್ಲಿಯೂ ಪರಿಶೀಲನೆ’

ಕಂಬಳದಲ್ಲಿ ಕೋಣಗಳಿಗೆ ಯಾವುದೇ ಕಾರಣಕ್ಕೂ ಹಿಂಸೆ ಮಾಡಬಾರದು. ಜತೆಗೆ 3 ವರ್ಷದ ಒಳಗಿನ ಕೋಣಗಳ ಓಟಕ್ಕೆ ಅವಕಾಶ ಇಲ್ಲ. ಇದೆಲ್ಲ ಅಂಶಗಳ ಬಗ್ಗೆ ಇಲಾಖೆಯ ಸಿಬಂದಿ ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಾರೆ. ಜತೆಗೆ ಇಲಾಖೆಯ ವೈದ್ಯಾಧಿಕಾರಿಗಳು ಸ್ಥಳದಲ್ಲಿದ್ದು ತುರ್ತು ಚಿಕಿತ್ಸೆಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ ಎಂದು ದ.ಕ. ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಡಾ| ಅರುಣ್ ಕುಮಾರ್ ಹೇಳಿದರು.

ಕಂಬಳವನ್ನು ನಿಯಮ ಹಾಗೂ ಕಾನೂನುಬದ್ದವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಕಂಬಳ ಆಯೋಜಕರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಿಗದಿತ ಸಮಯದಲ್ಲಿ ಕಂಬಳ ಪೂರ್ಣಗೊಳಿಸುವುದು, ಸಬ್ ಜೂನಿಯರ್‌ಕೋಣಗಳ ಸ್ಪರ್ಧೆ ಸ್ಥಗಿತ ಹಾಗೂ ಕೋಣಗಳಿಗೆ ಯಾವುದೇ ಕಾರಣಕ್ಕೂ ಹಿಂದೆ ಆಗದಂತೆ ಅತ್ಯಂತ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ. ಸರಕಾರದ ಇಲಾಖೆಗಳು ಕೂಡ ಇದರ ಬಗ್ಗೆ ನಿಗಾ ವಹಿಸಿದೆ ಎಂದು ಕಂಬಳ ಅಸೋಸಿಯೇಶನ್ ಅಧ್ಯಕ್ಷರಾದ ಐಕಳ ಬಾವ ಡಾ| ದೇವಿಪ್ರಸಾದ್ ಶೆಟ್ಟಿ ಹೇಳಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

March 10, 2026

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕೋಟೆಕಾರು ಪಟ್ಟಣ ಪಂಚಾಯತ್ ನ 2026-27 ನೇ ಸಾಲಿನ ಆಯ್ಯವ್ಯಯ ಮಂಡನೆ

By UllalaVaniMarch 10, 20260

ಕೋಟೆಕಾರು ಪಟ್ಟಣ ಪಂಚಾಯತ್ 2026-27 ನೇ ಸಾಲಿನ ಆಯ್ಯವ್ಯಯ ಪ.ಪಂ ಅಧ್ಯಕ್ಷರಾದ ದಿವ್ಯ ಸತೀಶ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಂಡನೆ ಮಾಡಲಾಯಿತು.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಬ್ರಹ್ಮಶ್ರೀ ಬಿಲ್ಲವ ವೇದಿಕೆ ತೊಕ್ಕೊಟ್ಟು ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

March 10, 2026

ಮಾ.12 ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್

March 9, 2026

ಅಂತರರಾಷ್ಟ್ರೀಯ ನರವಿಜ್ಞಾನ ರೋಗನಿರೋಧಕ ಕಾರ್ಯಾಗಾರ

March 9, 2026
1 2 3 … 1,827 Next
Automatic YouTube Gallery

ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
Now Playing
ದೇರಳಕಟ್ಟೆ; "ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ...
ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ;"ನಿಟ್ಟೆ ಫಿಸಿಯೋ ಪ್ರೀಮಿಯರ್ ಲೀಗ್ ಸೀಸನ್-3" ಉದ್ಘಾಟನೆ

ದೇರಳಕಟ್ಟೆಯ ನಿಟ್ಟೆ ಮೈದಾನದಲ್ಲಿ ಆಯೋಜನೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Nitte #premiereLeague #cricket #Sports #Intercollege
Show More
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
Now Playing
ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ `ಮಹಿಳಾ ದಿನಾಚರಣೆ'
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ ...
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನಲೆ ;ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317-ಡಿ ವತಿಯಿಂದ
ವಾರ ಪೂರ್ತಿ ಕಾರ್ಯಕ್ರಮದ ಭಾಗವಾಗಿ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ `ಸಭಾ ಕಾರ್ಯಕ್ರಮ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Mangalore #lionsinternational #womensDay
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d