ಮಂಗಳೂರು; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಪಡೀಲ್‌ನಲ್ಲಿ ನಡೆದಿದೆ.
ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್ (26) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿಯ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.