ಸಾಲೆತ್ತೂರು: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಾವೆಯ ಶ್ರೀ ಚಾಮುಂಡೇಶ್ವರಿ ರಕ್ತೇಶ್ವರಿ ಕ್ಷೇತ್ರದ ಆಡಳಿತ ಸಮಿತಿ ವತಿಯಿಂದ “ಸಹಕಾರ ರತ್ನ” ಪ್ರಶಸ್ತಿ ಪುರಸ್ಕೃತರಾದ ಟಿ.ಜಿ. ರಾಜಾರಾಮ ಭಟ್ ಅವರನ್ನು ಶಾಲು ಹೊದಿಸಿ, ಫಲಪುಷ್ಟ ನೀಡಿ ಅಭಿನಂದಿಸಲಾಯಿತು.
ಕರ್ನಾಟಕ ಘನ ಸರಕಾರದ ವತಿಯಿಂದ ಕೊಡಮಾಡುವ ಸಹಕಾರ ರತ್ಮ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಬೆಂಗಳೂರು ಅಖಿಲ ಭಾರತ ಸಹಕಾರ ಸಪ್ತಾಹ ಇದರ ವತಿಯಿಂದ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿದ ಸೇವೆಯ ಮೂಲಕ ಭಾಜನರಾಗಿ, ಇಂದು ಸಹಕಾರ ರತ್ನ ಪುರಸ್ಕೃತರಾದವರು ಟಿ.ಜಿ ರಾಜಾರಾಮ ಭಟ್.
ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ರಕ್ತೇಶ್ವರಿ ಕ್ಷೇತ್ರದ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಉಪಾಧ್ಯಕ್ಷರು ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.