ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ಸಮಾಜದ ಕಟ್ಟಕಡೆಯ ಜನರಿಗೆ ಉಪಯುಕ್ತವಾಗುವ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರಗಳನ್ನು ಕಣಚೂರು ಸಂಸ್ಥೆ ಕೈಗೊಂಡಿದ್ದು, ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಹೇಳಿದ್ದಾರೆ.
ಅವರು ದೇರಳಕಟ್ಟೆಯ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಸೋಮವಾರ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡ ಕಿವುಡುತನ ಜಾಗೃತಿ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.
ಶಾರೀರಿಕವಾಗಿ ಆರೋಗ್ಯವಾಗಿದ್ದರೂ ಕಣ್ಣು ಮತ್ತು ಕಿವಿ ಸರಿಯಿಲ್ಲದೇ ಇದ್ದಲ್ಲಿ ಜೀವನ ನಿರ್ವಹಣೆ ಕಷ್ಟದಾಯಕ.ಅದರ ಜಾಗೃತಿ ಕಾರ್ಯಕ್ರಮ ಅಗತ್ಯ . ಈ ನಿಟ್ಟಿನಲ್ಲಿ ಕಣಚೂರು ಆಸ್ಪತ್ರೆ ವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಉಚಿತ ವೈದ್ಯಕೀಯ ಸೇವೆಯನ್ನು ಕಣಚೂರು ಆಸ್ಪತ್ರೆ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಆಸ್ಪತ್ರೆಯ ಡೀನ್ ಖಾಜಾ ನೆಸಿರುದ್ದೀನ್ ಮುಖ್ಯ ಅತಿಥಿಯಾಗಿದ್ದರು. ಕಣ್ಣು ಕಿವಿ ಮತ್ತು ಮೂಗು ವಿಭಾಗದ ಡಾ.ನಿಷಾ ಕಿವಿಗೆ ಸಂಬಂಧಿಸಿದ ಮಾಹಿತಿ ನೀಡಿದರು. ಆಲ್ಪ್ಸ್ ಸಂಸ್ಥೆಯ ಮಾರಾಟ ಪ್ರತಿನಿಧಿ ರೂಪೇಶ್ ಚಿಕಿತ್ಸೆ ಕುರಿತು ಮಾಹಿತಿ ನೀಡಿದರು.
ಕಣಚೂರು ಆಸ್ಪತ್ರೆಯ ಕಣ್ಣು ಕಿವಿ ಮತ್ತು ಮೂಗು ವಿಭಾಗದ ಡಾ. ಝೈನಾಬಿ ಅಲಿ ಸ್ವಾಗತಿಸಿದರು. ಶಿಫಿಲಿ ವಂದಿಸಿದರು.









