Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ನ್ಯೂ ಇಯರ್ ಹಿನ್ನಲೆ ಮಾರ್ಗಸೂಚಿ ಪ್ರಕಟಿಸಿದ ಮಂಗಳೂರು ನಗರ ಪೊಲೀಸರು

UllalaVaniBy UllalaVaniDecember 17, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಡಿ. 17 : ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆ ಮಂಗಳೂರು ನಗರ ಪೊಲೀಸರು ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಹೊಸ ವರ್ಷಾಚರಣೆಯನ್ನು ಆಯೋಜನೆ ಮಾಡಲಾಗುವ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಕಾರ್ಯಕ್ರಮಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯಕ ಪೊಲೀಸ್ ಆಯುಕ್ತರುಗಳ ಕಛೇರಿಯಿಂದ ಕಡ್ಡಾಯವಾಗಿ ಪೂರ್ವ ಅನುಮತಿ ಪಡೆಯಬೇಕು. ಈ ಅರ್ಜಿಗಳನ್ನು ಡಿಸೆಂಬರ್ 23 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಿ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳನ್ನು ಆಯೋಜಿಸಲು ಅನುಮತಿ ಕಾನೂನು ಕ್ರಮಗಳನ್ನು ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕೈಗೊಳ್ಳಲಾಗುತ್ತದೆ.ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು. ಈ ಸಮಯದ ಬಳಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿಸಲಾಗುವುದಿಲ್ಲ.ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್‌ಗಳನ್ನು ಬಳಸಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿಯನ್ನು ಪಡೆಯಬೇಕು. ಧ್ವನಿಯ ಮಟ್ಟವು ಶಬ್ದ ಮಾಲಿನ್ಯ ನಿಯಮಗಳು ೨೦೦೦ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಅನುಸರಿಸಬೇಕು. ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ಹೊಸ ವರ್ಷಾಚರಣೆ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ನಿಷೇದಿತ ಮಾದಕ ವಸ್ತುಗಳ ಸಂಗ್ರಹಣೆ ಮತ್ತು ಸೇವನೆಯನ್ನು ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.ಹೊಸವರ್ಷ ಸಂಭ್ರಮಾಚರಣೆಯ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೇನಗ್ನ ಪ್ರದರ್ಶನಗಳು, ಜೂಜು ಹಾಗೂ ಇತರ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ಮದ್ಯ ಮಾರಾಟ ಮತ್ತು ವಿತರಣೆಗೆ ಸ್ಥಳೀಯ ಅಬಕಾರಿ ಇಲಾಖೆಯಿಂದ ಅಖಿತ ಅನುಮತಿ ಕಡ್ಡಾಯವಾಗಿ ಪಡೆದುಕೊಂಡಿರಬೇಕು.ಅಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸನ್ಸ್ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ಉದ್ಯಾನಗಳು, ಕ್ರೀಡಾಂಗಣಗಳು, ರೈಲ್ವೆ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸಿ ಕಿಡಿಗೇಡಿತನವನ್ನು ಪ್ರದರ್ಶನ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.ಆಯೋಜಕರು ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಅಗ್ನಿಶಾಮಕ ಸಾಧನಗಳನ್ನು, ತುರ್ತು ವೈದ್ಯಕೀಯ ವಾಹನಗಳನ್ನು ಮತ್ತು ಇತರ ಭದ್ರತಾ ಕ್ರಮಗಳನ್ನು ಸಂಯೋಜಿಸಬೇಕು.ಆಯೋಜಕರು ಯಾವುದೇ ಅನಾಹುತದ ತಡೆಗಾಗಿ ಪೂರಕ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಆಯೋಜಗರುಗಳು ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸಬೇಕು.ಹೊಸ ವರ್ಷಾಚರಣೆಯನ್ನು ನಡೆಸುವ ಹೋಟೆಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಕಾರ್ಯಕ್ರಮಗಳಲ್ಲಿ ಮದ್ಯ ವಿತರಣೆಯಂತಹ ವ್ಯವಸ್ಥೆಗೊಳಿಸಿದ್ದ ಪಕ್ಷದಲ್ಲಿ 18 ವರ್ಷದ ಕೆಳಗಿನ ಅಪ್ರಾಪ್ತರಿಗೆ ಅಂತಹ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರ್ಬಂಧಿಸುವುದು.ಸಂಭ್ರಮಾಚರಣೆಯ ಹೆಸರಿನಲ್ಲಿ ಮಹಿಳೆಯರು, ಹೆಣ್ಣುಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ, ಹಿಂಸಾಚಾರ ಅಥವಾ ಅಶ್ಲೀಲ ಚಟುವಟಿಕೆಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜಿಸಲಾಗುತ್ತವೆ.ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ. ಈ ಕಾರ್ಯಪಡೆಯು ಮಂಗಳೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಡ್ರಿಂಕ್ ಅಂಡ್ ಡ್ರೈವ್ ರೀತಿಯ ಕಾನೂನು ಕ್ರಮ ಕೈಗೊಂಡು ವಾಹನಗಳನ್ನು ಮುಟ್ಟುಗೋಲು ಹಾಕಲಾಗುವುದು.ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್, ವೇಗದ ಚಾಲನೆಯು ಮತ್ತು ಧ್ವನಿಯ ಶಬ್ದರಾಶಿ ಉತ್ಪಾದಿಸುವ ಕಾರ್ಯಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಘಟನೆಗಳನ್ನು ತಡೆಹಿಡಿಯಲು ವಿಶೇಷ ತಂಡಗಳು ನಿಯೋಜಿಸಲಾಗುತ್ತವೆ.ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಮುದ್ರ ಬದಿಗಳಲ್ಲಿ ಮದ್ಯಪಾನ ಸೇವಿಸುವುದು, ಅಶ್ಲೀಲ ವರ್ತನೆಗಳು, ಇತರ ಅಶ್ಲೀಲ ಪ್ರದರ್ಶನಗಳು ಕಡ್ಡಾಯವಾಗಿ ನಿಷೇಧಿಸಲಾಗಿದೆ.ಹೊಸ ವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

May 1, 2026

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
All News

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

By UllalaVaniMay 1, 20260

ಹರೇಕಳ: ದೊಡ್ಡ ಗಾತ್ರದ ಕಾಡುಕೋಣವೊಂದು ಹರೇಕಳ ಶಾಲೆ ಬಳಿ ತಡರಾತ್ರಿ ವೇಳೆ ಪತ್ತೆಯಾಗಿದ್ದು , ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ .…

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026
1 2 3 … 1,892 Next
Automatic YouTube Gallery

|| ULLALA TALUK HIGHLIGHTS || 01.05.2026

|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 01.05.2026
Now Playing
|| ULLALA TALUK HIGHLIGHTS || 01.05.2026
|| ULLALA TALUK HIGHLIGHTS 📍 Ullal | Dakshina Kannada | Coastal ...
|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version