Site icon Ullalavani

ಮುಂಬೈ ಉದ್ಯಮಿ ಟಿ. ಆರ್. ಪೂಂಜಾ ನಿಧನ


ಮುಂಬೈ, ಡಿ. 18; ಮುಂಬೈ ಯ ಖ್ಯಾತ ಉದ್ಯಮಿ ಟಿ. ಆರ್. ಪೂಂಜಾ ಅವರು ಡಿ. 17ರಂದು ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ. ಅವರ ಅಂತ್ಯ ಕ್ರಿಯೆ ಡಿ. 19ರಂದು ಮುಂಬೈ ಮುಲುಂದ್ ನಲ್ಲಿ ನಡೆಯಲಿದೆ.

ಇವರ ನಿಧನಕ್ಕೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ, ವಿಧಾನಸಭಾಧ್ಯಕ್ಷ ಯು. ಟಿ. ಖಾದರ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ವಿಜಯ ಕುಮಾರ್ ಶೆಟ್ಟಿ, ಶ್ರೀ ದೇವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಆಳ್ವ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಮೋಹನ್ ಆಳ್ವ, ಕಾಂಗ್ರೆಸ್ ಮುಖಂಡರಾದ ಕಳ್ಳಿಗೆ ತಾರಾನಾಥ್ ಶೆಟ್ಟಿ, ಎಂ. ಜಿ. ಹೆಗ್ಡೆ, ಟಿ. ಕರುಣಾಕರ ಶೆಟ್ಟಿ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version