ಮಂಗಳೂರು,ಡಿ19: ಬಜ್ಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಡಿ.21ರಂದು ನಡೆಯಲಿರುವ ಚುನಾವಣೆಯ ಮತ ಎಣಿಕೆ ಡಿ. 24ರಂದು ಮಂಗಳೂರು ತಾಲೂಕು ಆಡಳಿತ ಸೌಧ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಟ್ಟಡದಲ್ಲಿ ನಡೆಯಲಿರುವುದರಿಂದ, ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂತಿ ಕಾಪಾಡುವ ಸಲುವಾಗಿ ಸಾರ್ವಜನಿಕ ಹಿತದೃಷ್ಠಿಯಿಂದ ಮತ ಎಣಿಕೆ ಕೇಂದ್ರದ ಸುತ್ತಲೂ 200ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
ಮತ ಎಣಿಕೆ ಸಂದರ್ಭದಲ್ಲಿ ಸಾರ್ವಜನಿಕರು 5ಕ್ಕಿಂತ ಹೆಚ್ಚಿನ ಸಂಖ್ಯೆಯಲಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ಅಥವಾ ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಾಕಾಸ್ತçವನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಲಾಗಿದೆ. ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು ಎಂದು ಆದೇಶಿಸಲಾಗಿದೆ.
ಬಜ್ಪೆ-ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯ ಮತೆಣಿಕೆ ಶಾಂತಿಯುತವಾಗಿ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಈ ಸಂದರ್ಬದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಬೆಳಗ್ಗೆ 6ಗಂಟೆಯಿAದ ಸಮಜೆ 6ಗಂಟೆಯವರೆಗೆ `ಶುಷ್ಕ ದಿನ’ ಎಂದು ಘೋಷಿಸಿ ಮತ ಎಣಿಕೆ ನಡೆಯುವ ಕೇಂದ್ರದಿAದ 100 ಮೀ. ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮಧ್ಯ ತಯಾರಿಕಾ ಘಟಕಗಳನ್ನು ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಎಲ್ಲಾ ವಿಧದ ಮದ್ಯ ಮಾರಾಟದವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.