ಉಳ್ಳಾಲ,ಡಿ.20: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧೀನಕ್ಕೊಳಪಟ್ಟ ಉಳ್ಳಾಲ ಘಟಕದ ಅಧ್ಯಕ್ಷರಾಗಿ ಪ್ರವೀಣ್ ಕುಂಪಲ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ದ.ಕ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಪ್ರವೀಣ್ ಕೊಡಿಯಾಬೈಲ್ ಅವರು ಅಧಿಕೃತವಾಗಿ ಮಾಹಿತಿಯನ್ನು ಹಂಚಿಕೊAಡಿದ್ದಾರೆ.
ಜಾನಪದ ವಿಷಯಗಳಲ್ಲಿ ಆಸಕ್ತಿ ಹೊಂದಿರುವ ಪ್ರವೀಣ್ ಕುಂಪಲ ಅವರು ಜಿಲ್ಲಾ ಘಟನಕದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸನ್ನದ್ದರಾಗಿದ್ದಾರೆ.
ರಾಜ್ಯ ಮತ್ತು ಜಿಲ್ಲಾ ಘಟಕದ ಮಾರ್ಗದರ್ಶನದೊಂದಿಗೆ ಉಳ್ಳಾಲ ಭಾಗದಲ್ಲಿ ಜಾನಪದದೊಂದಿಗೆ ಉಳ್ಳಾಲ ಭಾಗದಲ್ಲಿ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಉಳ್ಳಾಲ ಘಟಕದ ವತಿಯಿಂದ ವಿವಿಧ ಜಾನಪದ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಯಶಸ್ವಿಯಾಗಿ ನಡೆಯಲಿವೆ ಎಂಬ ನಿರೀಕ್ಷೆಯಿದೆ.
ಉಳ್ಳಾಲ ಭಾಗದಲ್ಲಿ ಜಾನಪದ ಕಲೆ, ಸಂಸ್ಕೃತಿ ಮತ್ತು ಪರಂಪರೆ ಅಭಿವೃದ್ಧಿಗೆ ಪೂರಕವಾಗಿ ಈ ಆಯ್ಕೆಯನ್ನು ಮಾಡಲಾಗಿದೆ. ಪ್ರವೀಣ್ ಕುಂಪಲ ಅವರ ನೇಮಕಾತಿಯು ಉಳ್ಳಾಲ ಘಟಕದ ವ್ಯಾಪ್ತಿಯಲ್ಲಿ ಜಾನಪದ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲಿದ್ದು, ಈ ಭಾಗದ ಕಲೆಗಳ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ದು ಜಿಲ್ಲಾಧ್ಯಕ್ಷ ಪ್ರವೀಣ್ ಕೊಡಿಯಾಬೈಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

