Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಡಿ. 25ರಂದು ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ‘ನೆರವು’ ಸಹಾಯಹಸ್ತ ಪ್ರದಾನ ಕಾರ್ಯಕ್ರಮ

UllalaVaniBy UllalaVaniDecember 23, 2025No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು : ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ‘ನೆರವು’ ಸಹಾಯಹಸ್ತ ಪ್ರದಾನ ಕಾರ್ಯಕ್ರಮವು ಡಿ. 25ರಂದು ಮಧ್ಯಾಹ್ನ 2 ಗಂಟೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯ ಲ್ಲಿ ನಡೆಯಲಿದೆ.ಈ ವರ್ಷ ಒಟ್ಟು 9.5ಕೋ.ರೂಗಳಿಗೂ ಅಧಿಕ ಮೊತ್ತ ವಿತರಿಸಲಾಗುವುದು ಎಂದು ಎಂ.ಆರ್.ಜಿ. ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಹೇಳಿದ್ದಾರೆ.

ಪ್ರತೀ ವರ್ಷ ಡಿಸೆಂಬರ್ 25 ರಂದು ನಾವು ಗೋಲ್ಡ್ ಫಿಂಚ್ ಮೈದಾನದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ವರ್ಷದಿಂದ ವರ್ಷಕ್ಕೆ ನಾವು ಬೆಂಬಲಿಸುತ್ತಿರುವ ಕುಟುಂಬಗಳು ಮತ್ತು ಸಂಘಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿದೆ. ಸಣ್ಣ ಪರಿವರ್ತನೆಯೊಂದು ನಮ್ಮ ನೆರವು ಕಾರ್ಯಕ್ರಮದಿಂದ ಆಗಿದೆ ಎಂಬುದನ್ನು ನಮಗೆ ದೊರಕಿರುವ ಹಿಮ್ಮಾಹಿತಿ ಹೇಳುತ್ತದೆ ಎಂದು ಎಂ.ಜಿ.ಆರ್ ಗ್ರೂಪ್ ನ ಚೆರ್ಮಾನ್ ಡಾ.ಕೆ.ಪ್ರಕಾಶ್ ಶೆಟ್ಟಿಯವರು ತಿಳಿಸಿದ್ದಾರೆ.

ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವೈದ್ಯಕೀಯ ಚಿಕಿತ್ಸೆ ಸುಲಭವಾಗಿದೆ ಎಂಬುದೇನೋ ನಿಜ. ಆದರೆ ಆ ಸವಲತ್ತುಗಳಿಗೆ ಎಲ್ಲರಿಗೂ ಪ್ರವೇಶ ಸಾಧ್ಯವಾಗುತ್ತಿಲ್ಲ ಎಂಬುದೂ ಅಷ್ಟೇ ಸತ್ಯ. ನಮ್ಮ ನೆರವಿನ ಮೊತ್ತದಲ್ಲಿ ದೊಡ್ಡ ಭಾಗ ಇದಕ್ಕೆ ಮೀಸಲಾಗಿದೆ. ಆಧುನಿಕ ಚಿಕಿತ್ಸೆಯ ಪ್ರಜಾಪ್ರಭುತ್ತೀಕರಣದ ನಿಟ್ಟಿನಲ್ಲಿ ನಮ್ಮದೊಂದು ಕಿರು ಹೆಜ್ಜೆ ಇದು ಎಂದು ನಾವು ಪ್ರಾಮಾಣಿಕವಾಗಿ ಮತ್ತು ನಮೃತೆಯಿಂದ ಭಾವಿಸುತ್ತೇವೆ ಎಂದರು.

ಜಾತಿ, ಧರ್ಮ, ಪಂಗಡ ಎಂಬ ಯಾವ ಮನುಷ್ಯ ನಿರ್ಮಿತ ಗಡಿಗಳಿಲ್ಲದೆ. ಅವಶ್ಯಕತೆ ಇರುವವರನ್ನು ನಮ್ಮ ತಂಡ ಹುಡುಕಿ, ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಿದೆ. ಇಲ್ಲಿ ಅವಶ್ಯಕತೆಯೇ ಮಾನದಂಡವಾಗಿದೆ. ನಮಗೆ ವಿಶ್ವಾಸವಿದೆ -ಅನಿವಾರ್ಯತೆ ಇಲ್ಲದಿದ್ದರೆ ಯಾರೂ ಅರ್ಜಿ ಹಾಕುವುದಿಲ್ಲ. ದೈಹಿಕ ಸಮಸ್ಯೆ ಇರುವ ದಿವ್ಯಾಂಗರು, ಡಯಾಲಿಸ್ ಸಹಿತ ನಿರಂತರ ಚಿಕಿತ್ಸೆಯನ್ನು ಪಡೆಯಬೇಕಾದ ಅನಿವಾರ್ಯತೆ ಇರುವವರು, ಶಿಕ್ಷಣ -ಮುಂದುವರಿಕೆಗೆ ನೆರವು ಬೇಕಾದವರು, ಸಿಂಗಲ್ ಪೇರೆಂಟ್ ಮಕ್ಕಳು, ಸಾಂಸ್ಕೃತಿಕ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ನೆರವಿನ -ಬೆಂಬಲ ಪಡೆಯಲಿದ್ದಾರೆ. ಮನೆ ಕಟ್ಟಿ ಅದರ ಗೃಹ ಪ್ರವೇಶಕ್ಕಾಗಿ ಕಾಯುತ್ತಿರುವವರಿಗೂ ಅವರ ಭಾವನಾತ್ಮಕ ಮತ್ತು ಹಣಕಾಸಿನ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿ ನೆರವು ಕೊಡಲಾಗುತ್ತಿದೆ. ಮನೆ ಕಟ್ಟಲು ಸಹಾಯ ಕೋರಿದ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಈ ಯೋಜನೆಯನ್ನು ಆರಂಭಮಾಡಿದ ಮೊದಲ ವರ್ಷ ಒಟ್ಟು 1.25 ಕೋ.ರೂ. ನೆರವು ವಿತರಿಸಿದ್ದೇವೆ.ಆಗ 28 ಸಂಘ ಸಂಸ್ಥೆಗಳು ಪ್ರಯೋಜನ ಪಡೆದಿವೆ. ಈಗ 7ನೇ ವರ್ಷದಲ್ಲಿ 100ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ನೆರವು ವಿತರಣೆಯಾಗಲಿದೆ. ಸರಿಸುಮಾರು 4 ಸಾವಿರ ಕುಟುಂಬಗಳು ಈ ಕಾರ್ಯಕ್ರಮದಲ್ಲಿ “ನೆರವು” ಬೆಂಬಲ ಪಡೆಯಲಿವೆ. 9.5 ಕೋ.ರೂ. ಗಳಿಗೂ ಅಧಿಕ ಮೊತ್ತ ವಿತರಿಸಲಾಗುತ್ತಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಪ್ರಾದೇಶಿಕತೆಯನ್ನೂ ಗಮನಿಸಲಾಗಿದೆ. ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಕೊಪ್ಪ, ಸಕಲೇಶಪುರ ಮತ್ತು ನಮ್ಮ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಮಾಡಲಾಗಿದೆ. ನಾವು ಆಯ್ಕೆಗೆ ಸಂಬಂಧಿಸಿ ಸ್ವಾಯತ್ತ ಸಮಿತಿಯನ್ನು ಹೊಂದಿದ್ದೇವೆ, ಎಲ್ಲ ಜವಾಬ್ದಾರಿಯನ್ನೂ ಅದು ನಿಭಾಯಿಸುತ್ತದೆ ಎಂದರು.

ವರ್ಷಂಪ್ರತಿಯಂತೆ ಈ ವರ್ಷವೂ ಸಾಧಕರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಅವರು ಪಾಲ್ಗೊಳ್ಳುತ್ತಾರೆ. ಚಲನ ಚಿತ್ರ ನಿರ್ಮಾಪಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾಗವಹಿಸುತ್ತಾರೆ. ಮೂಡಬಿದ್ರೆಯ ಆಳ್ವಾಸ್ ಎಜುಕೇಷನ್ ಟ್ರಸ್ಟ್‌ನ ಡಾ. ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪಿನ ಗೌರವ್ ಪಿ. ಶೆಟ್ಟಿ ಅಂದಿನ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಇರುತ್ತಾರೆ ಎಂದರು.

ಕಳೆದ ವರ್ಷ 3000 ಕುಟುಂಬಗಳಿಗೆ ಆರು ಕೋಟಿ ನೆರವು ವಿತರಿಸಲಾಗಿತ್ತು. ಈ ವರ್ಷ ಸರಿಸುಮಾರು 4000 ಕುಟುಂಬಗಳಿಗೆ ಮತ್ತು 100 ಕ್ಕೂ ಅಧಿಕ ಸಂಘ ಸಂಸ್ಥೆಗಳಿಗೆ ನೆರವು ವಿತರಿಸಲಾಗುತ್ತಿದೆ. 9.5 ಕೋ.ರೂ. ಗಳಿಗೂ ಅಧಿಕ ಮೊತ್ತ ವಿತರಿಸಲಾಗುತ್ತಿದೆ ಎಂದರು.ಕಳೆದ ವರ್ಷದವರೆಗೆ ಪ್ರಧಾನವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದ ಯೋಜನೆಯ ಭೌಗೋಳಿಕ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು ಭಾಗಶಃ ಉತ್ತರ ಕನ್ನಡ ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ ಎಂದರು. ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮೂಲಕ ಅಥವಾ ಕೆಲವು ಸಂದರ್ಭಗಳಲ್ಲಿ ಚೆಕ್ ಮೂಲಕ ಪಾವತಿಸಲಾಗುತ್ತದೆ.ಸಮುದಾಯದ ಆಸ್ತಿಗಳನ್ನು ಸೃಷ್ಟಿಸುವ ಧಾರ್ಮಿಕ ಕ್ಷೇತ್ರ, ಪರಂಪರೆಯ ಕ್ಷೇತ್ರಗಳಿಗೆ ನೆರವು ನೀಡಲಾಗಿದೆ. ಫಲಾನುಭವಿಗಳನ್ನು ಕರೆತರಲು ವಾಹನ ವ್ಯವಸ್ಥೆಯನ್ನು ಎಂದು ಹೇಳಿದ್ದಾರೆ.

ಶಿಕ್ಷಣಕ್ಕೆ ಪ್ರೋತ್ಸಾಹ ಶೀರ್ಷಿಕೆಯಡಿ ನೆರವು ಪಡೆದವರು ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಿ ಉದ್ಯೋಗಿಗಳಾಗಿದ್ದಾರೆ, ಅವರ ಕುಟುಂಬಗಳಿಗೆ ಆಧಾರ ಸ್ತಂಭವಾಗಿದ್ದಾರೆ. ಕ್ರೀಡಾ ಶೀರ್ಷಿಕೆಯಡಿ ಯೋಜನೆಯ ಬೆಂಬಲ ಪಡೆದವರು ಸಾಧನೆಯ ಪಥದಲ್ಲಿ ಸಾಗುತ್ತಿದ್ದಾರೆ.ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ನೀಡಿರುವ ಬೆಂಬಲದಿಂದ ಬಾಲಕ ಮತ್ತು ಬಾಲಕಿಯರಿಗೆ ನೈರ್ಮಲ್ಯಯುಕ್ತ ಶೌಚಾಲಯಗಳ ಸೌಲಭ್ಯ ಒದಗಿದೆ. ಪರೋಕ್ಷ ಪರಿಣಾಮ ಎಂದರೆ ಶಾಲಾ ಮಕ್ಕಳಲ್ಲಿ ನೈರ್ಮಲ್ಯದ ಕಾಳಜಿ ಹೆಚ್ಚಿದೆ, ಜೊತೆಗೆ ಆರೋಗ್ಯರಕ್ಷಣೆಯ ಕವಚವೂ ಬಲಗೊಂಡಿದೆ.

ಯೋಜನೆಯು ಶಿಕ್ಷಕರ ಕೊರತೆ ಇರುವ ಅನುದಾನಿತ/ಸರಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸುವ ಆಡಳಿತ ಮಂಡಳಿಗಳನ್ನು ಬೆಂಬಲಿಸಿದೆ. ಇದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಗ್ರಾಮೀಣ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗಿದೆ. ದಿವ್ಯಾಂಗರಿಗೆ ಅವರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಧನ ಸಲಕರಣೆಗಳನ್ನು ಖರೀದಿಸಲು ನೆರವು ಸಹಾಯ ಮಾಡಿದೆ. ಅನೇಕ ದಿವ್ಯಾಂಗರು ಚಲನೆಯ ಸ್ವಾತಂತ್ರ್ಯವನ್ನು ಪಡೆದಿದ್ದಾರೆ ಎಂದು ಹೇಳಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಚಿವ ಯು.ಟಿ. ಖಾದರ್‌ಗೆ ನಾಗದೇವರ ಆಶೀರ್ವಾದ ಕೋರಿ ಪ್ರಾರ್ಥನೆ

August 17, 2026

ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!

August 17, 2026

ಹಿರಿಯರ ಅನುಭವದ ಮಾತು ಕಡೆಗಣಿಸದಿರಿ: ವಿಜೇತ್ ಮಂಜನಾಡಿಪಟ್ಟೋರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

August 17, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಸಚಿವ ಯು.ಟಿ. ಖಾದರ್‌ಗೆ ನಾಗದೇವರ ಆಶೀರ್ವಾದ ಕೋರಿ ಪ್ರಾರ್ಥನೆ

By UllalaVaniAugust 17, 20260

ನಾಗರಪಂಚಮಿ ಅಂದ್ರೆ ತುಳುನಾಡಿನ ಜನರಿಗೆ ವಿಶೇಷವಾದ ಹಬ್ಬ. ಈ ಬಾರಿ ನಾಗರಪಂಚಮಿ ಇನ್ನಷ್ಟು ವಿಶೇಷವಾಗಿದ್ದು, ಸಮಸ್ತ ತುಳುನಾಡಿಗೆ ಸಾರ್ವತ್ರಿಕ ರಜೆ…

ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!

August 17, 2026

ಹಿರಿಯರ ಅನುಭವದ ಮಾತು ಕಡೆಗಣಿಸದಿರಿ: ವಿಜೇತ್ ಮಂಜನಾಡಿಪಟ್ಟೋರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

August 17, 2026

ದೇರಳಕಟ್ಟೆಯಲ್ಲಿ ರಸ್ತೆಗೆ ಮೀನು ಅಂಗಡಿಯ ಐಸ್ ನೀರು: ಸಾರ್ವಜನಿಕರಿಗೆ ತೊಂದರೆ

August 17, 2026
1 2 3 … 2,065 Next
Automatic YouTube Gallery

ಕೋಟೆಪುರ ಸಮುದ್ರತೀರದಲ್ಲಿ ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ..

ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ; ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ..!

ದೋಣಿಯಿಂದ ಕಣ್ಮರೆಯಾದ ಕುಂದಾಪುರದ ಯುವಕನದ್ದೆಂಬ ಶಂಕೆ!


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಪುರ ಸಮುದ್ರತೀರದಲ್ಲಿ ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ..
Now Playing
ಕೋಟೆಪುರ ಸಮುದ್ರತೀರದಲ್ಲಿ ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ..
ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ; ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ..! ...
ಕೊಳೆತ ಸ್ಥಿ#ತಿಯಲ್ಲಿ ಶ# ಪ#ತ್ತೆ; ಕೋಟೆಪುರ ಸಮುದ್ರ ತೀರದಲ್ಲಿ ಪತ್ತೆ..!

ದೋಣಿಯಿಂದ ಕಣ್ಮರೆಯಾದ ಕುಂದಾಪುರದ ಯುವಕನದ್ದೆಂಬ ಶಂಕೆ!


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ನಡೆದ 80ನೇ ಸ್ವಾತಂತ್ರ್ಯ ದಿನ
Now Playing
ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ನಡೆದ 80ನೇ ಸ್ವಾತಂತ್ರ್ಯ ದಿನ
ಮಾಡೂರು ಸರಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ; ಸ್ವಾತಂತ್ರ್ಯ ದಿನದ ನೈಜ ...
ಮಾಡೂರು ಸರಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ; ಸ್ವಾತಂತ್ರ್ಯ ದಿನದ ನೈಜ ಕಲ್ಪನೆ ಶಾಲೆಯಲ್ಲಿ ಸಾಕಾರ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version