Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಡಿ. 25ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ 40ನೇ ವರ್ಷಾಚರಣೆ ‘ಮಾರುತಿ ಮಾಣಿಕ್ಯ ಮಹೋತ್ಸವ -2025

UllalaVaniBy UllalaVaniDecember 23, 2025No Comments4 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp


ಉಳ್ಳಾಲ ; ಕಳೆದ ನಾಲ್ಕು ದಶಕಗಳ ಕಾಲ ಸಾಮಾಜಿಕ, ಕ್ರೀಡೆ ಸೇರಿದಂತೆ ಶೈಕ್ಷಣಿಕ ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೊಗವೀರಪಟ್ಣದ ಮಾರುತಿ ಜನಸೇವಾ ಸಂಘ (ರಿ.), ಮಾರುತಿ ಯುವಕ ಮಂಡಲ (ರಿ.) 40ನೇ ವರ್ಷಾಚರಣೆ ‘ಮಾರುತಿ ಮಾಣಿಕ್ಯ ಮಹೋತ್ಸವ -2025, ಸಮಾರೋಪ ಸಂಭ್ರಮ ಡಿ. 25ರಂದು ಸಂಜೆ 3.00 ಗಂಟೆಗೆ ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.


ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 40 ನೇ ವರ್ಷಾಚರಣೆಯ ಪ್ರಯುಕ್ತ ಸುಮಾರು 40ಕ್ಕೂ ಹೆಚ್ಚು ಕಾರ್ಯಕ್ರಮಗಳು 2025 ಜನವರಿಯಿಂದ ಡಿಸೆಂಬರ್ ವರೆಗೆ ಹಮ್ಮಿಕೊಂಡಿದ್ದು, ಡಿ. 25ರಂದು ನಡೆಯುವ ಸಮಾರೋಪ ಸಂಭ್ರಮದಲ್ಲಿ ವಿಶ್ವಕಪ್ ಚಿನ್ನದ ಪದಕ ವಿಜೇತ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ ವಳಕುಂಜ, 2024 -25ನೇ ಸಾಲಿನ ಪಿಯುಸಿ ವಾಣಿಕ್ಯ ವಿಭಾಗದಲ್ಲಿ ಪ್ರಥಮ ರ್ಯಾಂಕ್ ವಿಜೇತೆ ದೀಪಾಶ್ರೀ ಎಸ್., ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಭರತನಾಟ್ಯ ಕಲಾವಿದೆ ರೆಮೋನಾ ಇವೆಟ್ ಫಿರೇರಾ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ನಾಗಸ್ವರ ಹಾಗೂ ಸ್ಯಾಕ್ಸೋಫೋನ್ ಕಲಾವಿದ ಡಾ| ಶಮ್ಮಿ ಗಫೂರ್ ಪಡುಬಿದ್ರಿ ಅವರಿಗೆ ಮಾರುತಿ ಸಾಧಕ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಎರಡು ಕುಟುಂಬಗಳಿಗೆ ಮನೆ ಹಸ್ತಾಂತರ, ಗೌರವ ಸಮರ್ಪಣೆ, ಕರಾವಳೀ ಆಹಾರ ಮೇಳ, ಸಾಂಸ್ಕೃತಿಕ ವೈಭವದೊಂದಿಗೆ 40ನೇ ವರ್ಷಾಚರಣೆಯ ಸಮಾರೋಪ ಸಂಭ್ರಮ ಸಂಪನ್ನಗೊಳ್ಳಲಿದೆ.


ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್, ಉಡುಪಿಯ ಅಂಬಲಪಾಡಿಯ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ಅಂ ನ ಪ್ರವರ್ತಕ ನಾಡೋಜ ಡಾ|| ಜಿ. ಶಂಕರ್, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಜನತಾ ಫಿಶ್ ಮೀಲ್ ಎಂಡ್ ಫುಡ್ ಪ್ರೊಡಕ್ಷನ್ ನ ಆಡಳಿತ ನಿರ್ದೇಶಕ ಆನಂದ ಸಿ. ಕುಂದರ್, ಉದ್ಯಮಿ ಸಂತೋಷ್ ಸುವರ್ಣ, ಕೋಡಿಕಲ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಉಡಪಿ ವಿಧಾನಸಭಾ ಶಾಸಕ ಯಶ್‌ಪಾಲ್ ಎ. ಸುವರ್ಣ, ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಕೌನ್ಸಿಲ್ ನ ಚೇರ್ಮೆನ್ ಯು.ಟಿ. ಇಫ್ತಿಕಾರ್ ಫರೀದ್, ಬಹರೈನ್ ನ ಮೆಟಲ್ ಗ್ರೂಪ್ ಆಫ್ ಕಂಪೆನೀಸ್ ನ ಅಬ್ದುಲ್ ರಝಾಕ್, ಮೊಗವೀರ್ಸ್ ಬಹರೈನ್ ನ ಅಧ್ಯಕ್ಷೆ ಶಿಲ್ಪಾ ಶಮಿತ್ ಕುಂದರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಪಾಧ್ಯಕ್ಷ ಮೋಹನ್‌ ಬೆಂಗ್ರೆ, ಯಚ್.ಎಸ್. ನಿಸಾರ್, ಉದ್ಯಮಿ ಹಾಗೂ ಮಾರುತಿ ಕ್ರಿಕೆಟರ್ಸ್ ಮಾಜಿ ಅಧ್ಯಕ್ಷ ಯಚ್.ಎಸ್. ನಿಸಾರ್, ಮತ್ತೋದ್ಯಮಿ ಉಮೇಶ್ ಟಿ. ಕರ್ಕೇರ ಮತ್ಸ್ಯರಾಜ್ ಕುಳಾಯಿ, ಎವರೆಸ್ಟ್ ಸೀ ಫುಡ್ಸ್ ಪ್ರೈ.ಲಿ. ಆಡಳಿತ ನಿರ್ದೇಶಕ ಸಿಂಧೂರಾಮ್ ಎ. ಪುತ್ರನ್, ಕಾಂಚನ ಹುಂಡೈ ಆಡಳಿತ ನಿರ್ದೇಶಕ ಪ್ರಸಾದ್‌ರಾಜ್ ಕಾಂಚನ್,
ಉಡುಪಿಯ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ್ ಅಮೀನ್, ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಕ್ರೀಡಾಪಟು ಸಹನಾ ಕುಮಾರಿ ಸೇರಿದಂತೆ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಝೀ ಟಿ.ವಿ. ಡಿಐಡಿ ಖ್ಯಾತಿಯ ರಾಷ್ಟ್ರ ಪ್ರಶಸ್ತಿ ವಿಜೇತೆ ವಿದುಷಿ ಜ್ನಾನ ಐತಾಳ್ ಹೆಜ್ಜೆನಾದ ತಂಡದವರಿಂದ ನೃತ್ಯ ವೈವಿದ್ಯ, ಖ್ಯಾತ ಹಿನ್ನಲೆ ಗಾಯಕರಾದ ಸುಪ್ರಿತ್ ಸಫಲಿಗ ಹಾಗೂ ಮಲ್ಲಿಕಾ ಮಟ್ಟಿ ಇವರಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.


ಪತ್ರಿಕಾಗೋಷ್ಠಿಯಲ್ಲಿ ಮಾರುತಿ ಜನಸೇವಾ ಸಂಘ ಮತ್ತು ಮಾರುತಿ ಯುವಕ ಮಂಡಲದ ಗೌರವಾಧ್ಯಕ್ಷ ವರದರಾಜ್ ಬಂಗೇರ, ಅಧ್ಯಕ್ಷ ಸಂದೀಪ್ ಪುತ್ರನ್, ಪ್ರಧಾನ ಸಂಚಾಲಕ ಸುಧೀರ್ ವಿ. ಅಮೀನ್, ಪ್ರ. ಕಾ. ಕಪಿಲ್ ಎಸ್. ಬಂಗೇರ, ಕ್ರೀಡಾ ಕಾರ್ಯದರ್ಶಿ ಮಹೇಶ್ ಸಾಲ್ಯಾನ್, ಸದಸ್ಯ ವಾಸುದೇವ ಕರ್ಕೇರ ಉಪಸ್ಥಿತರಿದ್ದರು.

ಮಾರುತಿ‌ ಮಾಣಿಕ್ಯಮಹೋತ್ಸವ 2025:
ಅಂಬಲಪಾಡಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ನಾಡೋಜ ಡಾ| ಜಿ. ಶಂಕರ್, ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಕೋಟ ಗೀತಾನಂದ ಪೌಂಡೇಷನ್‌ನ ಆನಂದ ಸಿ. ಕುಂದರ್ ಗೌರವ ಮಾರ್ಗದರ್ಶನದಲ್ಲಿ ವಿವಿಧ ಕ್ಷೇತ್ರದ ಗಣ್ಯರ ಗೌರವ ಸಲಹೆಯೊಂದಿಗೆ ನಾಲ್ಕು ದಶಕಗಳ ಸೇವಾಕಾರ್ಯದ ಆಚರಣೆ ‘ಮಾರುತಿ ಮಾಣಿಕ್ಯ ಮಹೋತ್ಸವ ‘ – ಸೇವೆಯಲ್ಲಿ ಧನ್ಯತೆ ಎಂಬ ಟ್ಯಾಗ್ ಲೈನ್‌ನೊಂದಿಗೆ
2025ರ ಫೆ 25ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಗಣ್ಯರ ಸಮ್ಮುಖದಲ್ಲಿ ಚಾಲನೆಗೊಂಡು ಕಳೆದ ಒಂದು ವರ್ಷದಲ್ಲಿ ಸುಮಾರು 3.5 ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿವಿಧ ಸಮಾಜ ಕಾರ್ಯಗಳನ್ನು ಆಯೋಜಿಸಿದೆ.ಮಂಗಳೂರಿನ ಮಂಕಿಸ್ಟ್ಯಾಂಡ್ ಶಾಂತಾ ಆಳ್ವ ಕಂಪೌಂಡ್ ನ ಮೊಹಿನಿ ವಿಶ್ವನಾಥ್ ಕುಟುಂಬಕ್ಕೆ ‘ ಮಾರುತಿ ಆಸರೆ‘ ಮನೆಯನ್ನು ನಿರ್ಮಿಸಿ ಹಸ್ತಾಂತರ ಮಾಡಿದ್ದು, ಉಳ್ಳಾಲ ಉಳಿಯದಲ್ಲಿ ಜ್ಯೋತಿ ಅವರ ಕುಟುಂಬದ ‘ಮಾರುತಿ ಆಶ್ರಯ ‘ ಮನೆ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಎರಡೂ ಮನೆಯ ಹಸ್ತಾಂತರ ಸಮಾರೋಪ ಕಾರ್ಯಕ್ರಮದಲ್ಲಿ ನಡೆಯಲಿದೆ. ಉಳ್ಳಾಲ ಆರೋಗ್ಯ ಕೇಂದ್ರದ ಶವಾಗಾರಕ್ಕೆ ಶವ ಶೀತಲೀಕರಣ ನಾಲ್ಕು ಪೆಟ್ಟಿಗೆಗಳ ಕೊಡುಗೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪರಿಸರ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ, ಆಸ್ಪತ್ರೆಗಳ ಸಹಯೋಗದೊಂದಿಗೆ ರಕ್ತದಾನ, ವೈದ್ಯಕೀಯ ಶಿಬಿರವನ್ನು ದಕ್ಷಿಣ ಕನ್ನಡದಲ್ಲಿ ಯಶಸ್ವಿಯಾಗಿ ಆಯೋಜಿಸಿದೆ. ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಮತ್ತು ಉಡುಪಿ ಅಂಬಲಪಾಡಿಯಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.)ನ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮಾರುತಿ ಮಾಣಿಕ್ಯ ಮಹೋತ್ಸವ ಅಭಿಯಾನ ಅಂಗವಾಗಿ ಸಾಮೂಹಿಕ ವಿವಾಹ ಸೇರಿದಂತೆ ಆರೋಗ್ಯ, ಮಾಹಿತಿ ಶಿಬಿರಗಳನ್ನು ಆಯೋಜಿಸಿದೆ.
ಕ್ರಿಕೆಟ್ ನಿಂದ – ಸಮಾಜಸೇವೆವರೆಗಿನ ನಾಲ್ಕು ದಶಕಗಳ ಸಾರ್ಥಕ ಸೇವೆ :
ಶ್ರೀ ವ್ಯಾಘ್ರ ಚಾಮುಂಡೇಶ್ವರೀ ಮಾತೆಯ ದಿವ್ಯ ನೆಲೆಯಾದ ಉಳ್ಳಾಲ ಕಡಲಕಿನಾರೆಯ ಮೊಗವೀರಪಟ್ಣದಲ್ಲಿ 1985ರಲ್ಲಿ ಕ್ರಿಕೆಟ್ ಆಟದ ಮೂಲಕ ಸ್ಥಾಪನೆಯಾದ ಶ್ರೀ ವೀರಮಾರುತಿ ಗೇಮ್ಸ್ ಟೀಂ' ಕಾಲಕ್ರಮೇಣ ಸೇವಾ ಕ್ಷೇತ್ರವನ್ನು ವಿಸ್ತರಿಸುವ ದೃಷ್ಟಿಯಿಂದ ಮಾರುತಿ ಕ್ರಿಕೆಟರ‍್ಸ್ (ರಿ.). ಮಾರುತಿ ಯುವಕ ಮಂಡಲ(ರಿ.), ಮಾರುತಿ ಜನಸೇವಾ ಸಂಘ(ರಿ.)ವಾಗಿ ಸಾಮಾಜಿಕ ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸೇವೆಯನ್ನು ಕಳೆದ ನಾಲ್ಕು ದಶಕಗಳಲ್ಲಿ ಸಲ್ಲಿಸಿದೆ, ಸಂಸ್ಥೆಯ ಬೆಳ್ಳಿ ಮಹೋತ್ಸವದ ಅಂಗವಾಗಿ ಉಳ್ಳಾಲ ಪರಿಸರದ ಪ್ರಥಮ ಶಾಲೆಯಾದ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಗೆ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಪ್ರಪ್ರಥಮ ಬೀಚ್ ಉತ್ಸವ ಸರ್ವಧರ್ಮದ ಲಕ್ಷಾಂತರ ಜನರ ಸೌಹಾರ್ಧತೆ, ಸಾಮರಸ್ಯದ ಸಂಭ್ರಮಕ್ಕೆ ಸಾಕ್ಷಿಯಾದ್ದದು, ಇತಿಹಾಸ. ಕೊರೊನಾ ಸಂದರ್ಭದಲ್ಲಿ 6 ಲಕ್ಷ ರೂ, ವೆಚ್ಚದಲ್ಲಿ ಸ್ಥಳೀಯ 625 ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ, 2023ರ ಫೆಬ್ರವರಿಯಲ್ಲಿ ನೆಹರೂ ಮೈದಾನದಲ್ಲಿ 60 ಲಕ್ಷ ರೂ ವೆಚ್ಚದಲ್ಲಿ ಮೊಗವೀರ ಪ್ರೀಮಿಯರ್ ಲೀಗ್' ಹಾಗೂ ರಾಷ್ಟ್ರಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಏಕಕಾಲದಲ್ಲಿ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಏರ್ಪಡಿಸಿದೆ. ಕಳೆದ 39 ವರುಷಗಳಲ್ಲಿ ಶೈಕ್ಷಣಿಕ ನೆರವು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ, ಕಡಲ್ಕೊರೆತದಲ್ಲಿ ಮನೆ ಕಳಕೊಂಡವರಿಗೆ ಮನೆ ನಿರ್ಮಾಣ, ದುರಸ್ತಿ ಆರ್ಥಿಕ ಸಹಾಯ ಹಾಗೂ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ಕಾರ್ಯವನ್ನು ನಡೆಸಿಕೊಂಡು ಬಂದಿದೆ ಎಂದರು. ಕಳೆದ ನಾಲ್ಕು ದಶಕಗಳ ಮಾರುತಿ ಯುವಕ ಮಂಡಲ ಮತ್ತು ಮಾರುತಿ ಜನಸೇವಾ ಸಂಘದ ಸಮಾಜ ಸೇವೆಯನ್ನು ಗುರುತಿಸಿ 2013ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2023ನೇ ಸಾಲಿನ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಶ್ರೀ ದಯಾನಂದ ನಾಯಕ್ ದತ್ತಿ ಪ್ರಶಸ್ತಿ 2024` ಸೇರಿದಂತೆ ಅನೇಕ ಸಂಘ ಸಂಸ್ಥೆಗಳಿಂದ ಗೌರವವನ್ನು ಪಡೆದುಕೊಂಡಿದೆ

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ವಕೀಲ ಮೋಹನರಾಜ್ ಕೆ.ಆರ್. ನೂತನ ಸದಸ್ಯರಾಗಿ ನೇಮಕ

June 26, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
All News

ಮಾತೃಶ್ರೀ ಬಡಾವಣೆಯ ಮಮತಾ ಶೆಟ್ಟಿ ಮತ್ತು ಅಗಸ್ಟಿನ್ ರ ಮನೆಯ ದಾರಿಗೆ ಅನುದಾನ ಮಂಜೂರಾದರೂ, ಟೆಂಡರ್‌ ಪೂರ್ಣಗೊಂಡಿಲ್ಲ : ಕೌನ್ಸಿಲರ್‌ ಹರೀಶ್‌ ರಾವ್‌ ಮಡ್ಯಾರ್

By UllalaVaniJune 26, 20260

ಕೋಟೆಕಾರು: 11ನೇ ವಾರ್ಡಿನ ಶಾಸ್ತಾವು ಮಾತೃಶ್ರೀ ಬಡಾವಣೆಯ ನಿವಾಸಿ ಮಮತಾ ಶೆಟ್ಟಿ ಮತ್ತು ಅಗಸ್ಟಿನ್ ಅವರ ಮನೆಗೆ ಹೋಗಲು ಇರುವ…

ʻಶಾಸಕರು ಅರ್ಧ ಬಿಟ್ಟ ಕಾಂಕ್ರೀಟಿಕರಣವನ್ನು ನಾನೇ ಪೂರ್ಣಗೊಳಿಸುತ್ತೇನೆ ʼ : ಅಧ್ಯಕ್ಷೆ ದಿವ್ಯಾ ಸತೀಶ್‌ ಶೆಟ್ಟಿ , ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟನೆಯಲ್ಲಿ ಭರವಸೆ

June 26, 2026

ಗ್ಯಾಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಅಗತ್ಯ – ಅಡುಗೆ ಅನಿಲವನ್ನು ಮೂಲಭೂತ ಹಕ್ಕಾಗಿ ಘೋಷಿಸಲಿ

June 26, 2026

ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯ ಸೆರೆ

June 26, 2026
1 2 3 … 1,986 Next
Automatic YouTube Gallery

ಶಾಸಕರು ರಸ್ತೆ ಮಧ್ಯಭಾಗದಲ್ಲೇ ಕಾಮಗಾರಿ ನಡೆಸದೇ ಇರುವುದು ಧರ್ಮಬೇಧವಲ್ಲವೇ? : ದಿವ್ಯಾ ಸತೀಶ್‌ ಶೆಟ್ಟಿ | Ullalavani

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಾಸಕರು ರಸ್ತೆ ಮಧ್ಯಭಾಗದಲ್ಲೇ ಕಾಮಗಾರಿ ನಡೆಸದೇ ಇರುವುದು ಧರ್ಮಬೇಧವಲ್ಲವೇ? : ದಿವ್ಯಾ ಸತೀಶ್‌  ಶೆಟ್ಟಿ | Ullalavani
Now Playing
ಶಾಸಕರು ರಸ್ತೆ ಮಧ್ಯಭಾಗದಲ್ಲೇ ಕಾಮಗಾರಿ ನಡೆಸದೇ ಇರುವುದು ಧರ್ಮಬೇಧವಲ್ಲವೇ? : ದಿವ್ಯಾ ಸತೀಶ್‌ ಶೆಟ್ಟಿ | Ullalavani
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ ರೂ.ಸಣ್ಣ  ರಸ್ತೆ ಕಾಮಗಾರಿಗೆ   ಸಚಿವ ಯು.ಟಿ.ಖಾದರ್‌ ಅವರು   ರಾಜಕೀಯ ಪ್ರದರ್ಶನಕ್ಕಾಗಿ ಬರುವುದು ಬೇಡ.
Now Playing
೫ ಲಕ್ಷ ರೂ.ಸಣ್ಣ ರಸ್ತೆ ಕಾಮಗಾರಿಗೆ ಸಚಿವ ಯು.ಟಿ.ಖಾದರ್‌ ಅವರು ರಾಜಕೀಯ ಪ್ರದರ್ಶನಕ್ಕಾಗಿ ಬರುವುದು ಬೇಡ.
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version