ಪೊಳಲಿ;ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಜೂಡೋ ಸ್ಪರ್ಧೆಯಲ್ಲಿ, ತರಬೇತುದಾರರಾದ ರಾಜೇಶ್ ಶ್ರೀಮಾನ್ ಅವರ ಮಾರ್ಗದರ್ಶನದಲ್ಲಿ ನೆತ್ತರಕೆರೆಯಲ್ಲಿ ನಡೆಯುತ್ತಿರುವ ಪೊಳಲಿ ಮಿಕ್ಸೆಡ್ ಮಾರ್ಟಿಯಲ್ ಆರ್ಟ್ಸ್ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಠಿಣ ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದ ಫಲವಾಗಿ ವಿದ್ಯಾರ್ಥಿಗಳು ಸಾಧಿಸಿದ ಈ ಯಶಸ್ಸು ಹೆಮ್ಮೆಯ ಸಂಗತಿಯಾಗಿದೆ. ಅವರ ಪ್ರತಿಭೆಯನ್ನು ಗುರುತಿಸಿ ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಿದ ತರಬೇತುದಾರರಾದ ರಾಜೇಶ್ ಶ್ರೀಮಾನ್ ಅವರಿಗೆ ಹಾಗೂ ಪ್ರಶಸ್ತಿ ಪಡೆದ ಸ್ಪರ್ಧಿಗಳಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.