Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

UllalaVaniBy UllalaVaniJanuary 1, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಟ್ಟಾರ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು, ಇವರ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿoದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಮಂಗಳೂರಿನ ಉರ್ವಸ್ಟೋರ್‌ನ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಜರುಗಿತು.



ಈ ಕಾರ್ಯಕ್ರಮವನ್ನು ಬ್ರಹ್ಮಕುಮಾರಿಯರ ಮಂಗಳೂರು ವಿಭಾಗದ ಮುಖ್ಯಸ್ಥರಾದ ಬಿ. ಕೆ ವಿಶ್ವೇಶ್ವರಿ ರವರು ಉದ್ಘಾಟಿಸಿ ಮಾತನಾಡಿ “ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು” ಎಂದರು.

ಮುಖ್ಯ ಅತಿಥಿಯಾದ ಹಿರಿಯ ಧಾರ್ಮಿಕ ಮುಖಂಡರಾದ ಯು. ಮಾಧವ ಸುವರ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನ ರೇವತಿ ಸನಿಲ್ ರವರು ಮಾತನಾಡಿ “ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಉಚಿತ ರಾಜಯೋಗ ಧ್ಯಾನ, ಜೀವನ ಮೌಲ್ಯಾಧರಿತ ಶಿಕ್ಷಣ ಹಾಗೂ ಇನ್ನಿತರ ಸೇವೆಗಳು ಲಭ್ಯವಿದ್ದು, ಇದರ ಲಾಭವನ್ನು ಪ್ರತಿ ತಿಂಗಳು ನಡೆಯುವ ಶಿಬಿರದಲ್ಲಿ ಪಡೆಯುವಂತೆ ವಿನಂತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ತುಂಬಾ ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಪ್ರತಿಯೊಬ್ಬರಿಗೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಬರುವ ಸಂದರ್ಭದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ ಆರೋಗ್ಯ ಪೂರ್ಣ ಸಮಾಜಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡಿದಂತಾಗುತ್ತದೆ ಎಂದರು.

ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇದರ ವೈದ್ಯರಾದ ಡಾ. ಅಪೂರ್ವ ಕೊಟ್ಯಾನ್ ರವರು ಮಾತನಾಡಿ, “ಪ್ರತಿಯೊಬ್ಬರು ಇತ್ತೀಚಿನ ದಿನಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಅತ್ಯಗತ್ಯ , ಶಿಬಿರಾರ್ಥಿಗಳಿಗೆ ಶಸ್ತç ಚಿಕಿತ್ಸೆಯ ಅಗತ್ಯವಿದ್ದಲ್ಲಿ ಹಸಿರು ಕಾರ್ಡಿನ ಮೂಲಕ ಉಚಿತವಾಗಿ ಶಸ್ತç ಚಿಕಿತ್ಸೆಯನ್ನು ಮಾಡಿಕೊಡಲಾಗುವುದು” ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 97ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಮುಂದಿನ ವರ್ಷ ಪೆಬ್ರವರಿ ತಿಂಗಳ ಒಂದರAದು ಪಡೀಲ್‌ನಲ್ಲಿ 100ನೇ ವೈದ್ಯಕೀಯ ಶಿಬಿರವನ್ನು ವ್ಯವಸ್ಥಿತವಾಗಿ ಬಹಳ ದೊಡ್ಡ ಮಟ್ಟದಲ್ಲಿ ಸಂಘದ ಪ್ರಧಾನ ಕಚೇರಿ ಪಡೀಲ್‌ನಲ್ಲಿ ಆಯೋಜನೆ ಮಾಡಲಾಗುವುದು. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಇವತ್ತಿನ ಶಿಬಿರವನ್ನು ಆಯೋಜಿಸಲು ಸಹಕಾರ ನೀಡಿದ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನ ರೇವತಿ ಸನಿಲ್‌ರವರಿಗೆ ಕ್ರತಜ್ನತೆಯನ್ನು ಸಲ್ಲಿಸಿದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕ್ರತಜ್ನತೆಯನ್ನು ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಮ್., ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದೇರಳಕಟ್ಟೆ ಇದರ ವೈದ್ಯರಾದ ಡಾ. ಅನುಪಮ ನಾಯರ್ ಮತಿತ್ತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 130ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ, ಉಚಿತ ಔಷಧಿ ವಿತರಣೆ ಹಾಗೂ ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.
ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನ ರೇವತಿ ಸನಿಲ್ ರವರು ಸ್ವಾಗತಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಭಾರ ಶಾಖಾಧಿಕಾರಿಯಾದ ಆಶಾ ರವರು ವಂದಿಸಿದರು.

ಸಂಘದ ಹಿರಿಯ ಶಾಖಾಧಿಕಾರಿ ಸೌಮ್ಯಲತಾ ರವರು ಕಾರ್ಯಕ್ರಮದ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

May 2, 2026

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

May 1, 2026

Comments are closed.

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
election

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

By UllalaVaniMay 2, 20260

ಕೇರಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಂಜೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.…

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಹರೇಕಳ: ತಡರಾತ್ರಿ ಕಾಡುಕೋಣ ಪ್ರತ್ಯಕ್ಷ ಸ್ಥಳೀಯರಲ್ಲಿ ಮನೆಮಾಡಿದ ಆತಂಕ

May 1, 2026

ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ….!!

May 1, 2026
1 2 3 … 1,892 Next
Automatic YouTube Gallery

|| ULLALA TALUK HIGHLIGHTS || 01.05.2026

|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| ULLALA TALUK HIGHLIGHTS || 01.05.2026
Now Playing
|| ULLALA TALUK HIGHLIGHTS || 01.05.2026
|| ULLALA TALUK HIGHLIGHTS 📍 Ullal | Dakshina Kannada | Coastal ...
|| ULLALA TALUK HIGHLIGHTS

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted ...
and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version