ಮಂಗಳೂರು ; ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಲ ಏಸು ಪುಣ್ಯಕ್ಷೇತ್ರ ದ ನಿರ್ದೇಶಕರಾದ ಫಾ| ಸ್ಟೀಫನ್ ಪಿರೇರಾ ರವರು ತಿಳಿಸಿದ್ದಾರೆ.
ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು ನಡೆಯಲಿದ್ದು ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿರುವರು. ಅದೇ ದಿನ ಬೆಳಿಗ್ಗೆ 10.00 ಘಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು ವಿಶೇಷ ಬಲಿಪೂಜೆಯನ್ನು ನೆರವೇರಿಸುವರು ಎಂದರು.
ಜನವರಿ 15ರಂದು ಬೆಳಿಗ್ಗೆ 10.00 ಘಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ದುಮಿಂಗ್ ಡಾಯಸ್ ನಡೆಸಿಕೊಡಲಿರುವರು. ಇದು ಮಕ್ಕಳಿಗಾಗಿ ಅರ್ಪಿಸಲಾಗುವ ವಿಶೇಷ ಪೂಜಾವಿಧಿಯಾಗಿದೆ. ಮಹೋತ್ಸವದ ಸಮಾರೋಪ ಪ್ರಾರ್ಥನಾ ವಿಧಿ ಸಂಜೆ 6.00 ಘಂಟೆಗೆ ಅತಿ ವಂದನೀಯ ಮೊನ್ಸಿಂಞರ್ ಮ್ಯಾಕ್ಸಿಂ ನೊರೊನ್ಹಾ, ಪ್ರಧಾನ ಗುರುಗಳು, ಮಂಗಳೂರು ಧರ್ಮಪ್ರಾಂತ್ಯ, ಇವರು ನೆರವೇರಿಸುವರು.