ಹರೇಕಳ,ಜ.05:: ಹರೇಕಳ ನಿವಾಸಿ ರಮೇಶ್ ಐತಾಳ್(49) ಅವರು ಅನಾರೋಗ್ಯದಿಂದ ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರು, ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಸಮಿತಿ ಸಹ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು.
ಮಂಗಳೂರಿನ ಸಂಸ್ಥೆಯಲ್ಲಿ ಲೆಕ್ಕ ಪರಿಶೋಧಕರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

