ಉಳ್ಳಾಲ;ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಣಾಜೆ ಗ್ರಾಮದಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ದಿನೇಶ್ ಮುಳೂರುರವರ ಮಾಲಕತ್ವದ ಪೆಟ್ರೋಲ್ ಬಂಕ್‌ಗೆ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್‌ನ ಅಧ್ಯಕ್ಷರಾದ ಯು. ಟಿ. ಇಫ್ತಿಕರ್ ಹಾಗೂ ರಾಜ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಭೇಟಿ ನೀಡಿದರು.

ಬಾಳೆಪುಣಿ ರಾಜೀವ್ ಗಾಂಧಿ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಕೂಟದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು ಬಳಿಕ ಪೆಟ್ರೋಲ್ ಬಂಕ್‌ಗೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ಬಯ್ಯ ಪ್ರಸಾದ್, ಮಂಗಳೂರು ವಿದ್ಯುಚ್ಛಕ್ತಿ ಪ್ರಸರಣ ನಿಗಮದ ಅಧ್ಯಕ್ಷ ಹರೀಶ್ ಕುಮಾರ್, ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯರಾದ ನಝರ್ ಷಾ ಪಟ್ಟೋರಿ, ಭೀಮ ಫ್ಯೂಲ್ ಸ್ಟೇಷನ್ ಮಾಲಕರಾದ ದಿನೇಶ್ ಮುಳೂರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




