Site icon Ullalavani

ಉಡುಪಿ: ಬಹುತೇಕ ವಿದ್ಯಾರ್ಥಿಗಳಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ..!

ಉಡುಪಿ: ಸರ್ಕಾರಿ ಬಸ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ನೇರಳಕಟ್ಟೆಯ ಶೆಟ್ರಕಟ್ಟೆ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಬಹುತೇಕ ವಿದ್ಯಾರ್ಥಿಗಳೇ ಇದ್ದ ಬಸ್ಸಿಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಏಕಾಏಕಿ ಎದುಗಡೆಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಒಂದು ಭಾಗ ಬಹುತೇಕ ನಜ್ಜು ಗುಜ್ಜಾಗಿದ್ದು, ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ತೀವ್ರತೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version