ಕರಾವಳಿ ಭಾಗದ ಪ್ರವಾಸೋದ್ಯಮವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಪ್ರದೇಶಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇವರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ಅಂತರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ರು. “ಈ ಭಾಗದ ಪ್ರವಾಸೋದ್ಯಮವನ್ನು ಉತ್ತೇಜಿಸಲು ನಾವು ಹೊಸ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದೇವೆ. ರಾಜ್ಯದ ಕರಾವಳಿ ಭಾಗವನ್ನು ಹತ್ತಿರದ ಕೇರಳ ಮತ್ತು ಗೋವಾ ರಾಜ್ಯಗಳ ಮಾದರಿಯಲ್ಲಿ ಮುನ್ನಡೆಯಿಸಲು ಸರ್ಕಾರ ಕೆಲಸಮಾಡುತ್ತಿದೆ ಎಂದ್ರು. ಇದೇ ವೇಳೆ ಅವರು ಸ್ಥಳೀಯ ಉದ್ಯೋಗ ಸೃಷ್ಟಿ ಕುರಿತಂತೆ ಮಾತನಾಡಿದ್ರು.