Site icon Ullalavani

ಕಾಸರಗೋಡು ಜಿಲ್ಲಾ ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಮಸೂದೆಗೆ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಖಂಡನೆ

ಬಂಟ್ವಾಳ,ಜ.12: ಗಡಿನಾಡ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಮಸೂದೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸಿದೆ.

ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲಯಾಳ ಭಾಷಾ ಮದೂದೆಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯಿಂದ ಕನ್ನಡಕ್ಕೆ ಕುತ್ತು ಬರಲಿದೆ ಎಂಬ ಆತಂಕ ಮೂಡಿದೆ. ಇದನ್ನು ನಿವಾರಿಸುವ ಕಾರ್ಯವಾಗಬೇಕು. ಕಾಸರಗೋಡಿನಲ್ಲಿ ಸುಮಾರು ಏಳೂವರೆ ಲಕ್ಷ ಕನ್ನಡಿಗರಿದ್ದು, 210ಕನ್ನಡ ಮಾಧ್ಯಮ ಶಾಲೆಗಳಿವೆ. ಕನ್ನಡ ಕಲಿಯುವ ಹಕ್ಕನ್ನು ಮೊಟಕುಗೊಳಿಸುವ ಕಾರ್ಯ ಕೇರಳ ಸರಕಾರದಿಂದ ಆಗುತ್ತಿರುವುದು ಖೇದನೀಯ.

ಬಂಟ್ವಾಳದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಹೇಳಿದ್ದಾರೆ. ಸಭೆ ಸರ್ವಾನುಮತದಿಂದ ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳ ಹೇರಿಕೆಯನ್ನು ಖಂಡಿಸಿತು.

Exit mobile version