Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜುಗಳನ್ನು ಪುಡಿ ಗೈದ ಪ್ರತಿಭಟನಾಕಾರರು…!

UllalaVaniBy UllalaVaniJanuary 15, 2026Updated:January 15, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕಾಸರಗೋಡು, ಜ. 15 : ರಾಷ್ಟ್ರೀಯ ಹೆದ್ದಾರಿ 66 ರ ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಶುಲ್ಕ ವಸೂಲು ಹೋರಾಟ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜುಗಳನ್ನು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ.

ಹೋರಾಟಕ್ಕೆ ಬೆಂಬಲವಾಗಿ ಕುಂಬಳೆ ಪೇಟೆಯಿಂದ ಬಂದ ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾಗಳನ್ನು ಧ್ವಂಸ ಗೊಳಿಸಿದ್ದು, ಕಚೇರಿ ಗಾಜುಗಳನ್ನು ಹಾನಿ ಗೊಳಿಸಿದ್ದಾರೆ. ವಾಹನಗಳನ್ನು ತಡೆಯುವ ಟೋಲ್ ಬೂತ್ ನ ಹ್ಯಾಂಡಲ್ ಗಳನ್ನು ಪ್ರತಿಭಟನಾಕಾರರು ಕಿತ್ತೆಸೆದಿದ್ದಾರೆ. ಸ್ಕ್ಯಾನರ್ ಗಳಿಗೆ ಕಪ್ಪು ಸ್ಟಿಕ್ಕರ್ ಲಗತ್ತಿಸಿದ್ದಾರೆ.ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ತಡೆಯಲು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ವಿವಿಧ ಯುವಜನ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಕಚೇರಿಯೊಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದರು. ಪ್ರತಿಭಟನೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಸೋಮವಾರದಿಂದ ಟೋಲ್ ಗೇಟ್ ಗೆ ಪೊಲೀಸರು ಭದ್ರತೆ ಕಲ್ಪಿಸಿದ್ದು, ಈ ನಡುವೆ ಬುಧವಾರ ರಾತ್ರಿ ನಡೆದ ಪ್ರತಿಭಟನಾ ಜಾಥಾದಲ್ಲಿ ಸಾವಿರಕ್ಕೂ ಅಧಿಕ ಪ್ರತಿಭಟನಾ ಕರಾರು ಪಾಲ್ಗೊಂಡರು.

ಇದರಿಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುವಂತಾಯಿತು. ಇನ್ನು ಪ್ರತಿಭಟನೆ ಬಳಿಕ ವಾಹನಗಳು ಟೋಲ್ ಶುಲ್ಕ ಇಲ್ಲದೆ ಸಂಚಾರ ನಡೆಸುತ್ತಿದೆ.ಟೋಲ್ ಶುಲ್ಕ ವಿರುದ್ಧ ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಇಂಪಾ ಶೇಖರ್ ನೇತೃತ್ವದ ಲ್ಲಿ ಬುಧವಾರ ಸಂಜೆ ನಡೆದ ಸಭೆ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ವಿಫಲಗೊಂಡಿತ್ತು. ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಮುಖ್ಯ ಕಾರ್ಯದರ್ಶಿಯವರ ಸಮ್ಮುಖದಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಯಿತು. ಆದರೆ ಪ್ರಕರಣ ಹೈಕೋರ್ಟ್ ವಿಚಾರಣೆ ಯಲ್ಲಿರುವುದರಿಂದ ಅಂತಿಮ ತೀರ್ಮಾನ ಹೊರಬೀಳುವ ತನಕ ಟೋಲ್ ಶುಲ್ಕ ವಸೂಲಿ ಸ್ಥಗಿತಗೊಳಿವಂತೆ ಶಾಸಕ ಅಶ್ರಫ್ ಒತ್ತಾಯಿಸಿದ್ದರು.ಸೋಮವಾರ ಬೆಳಿಗ್ಗೆಯಿಂದ ಟೋಲ್ ಶುಲ್ಕ ವಸೂಲು ವಿರುದ್ಧ ಹೋರಾಟ ನಡೆಯುತ್ತಿದ್ದು, ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಅನಿರ್ಧಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸತ್ಯಾಗ್ರಹಕ್ಕೆ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸತ್ಯಾಗ್ರಹ ಸ್ಥಳಕ್ಕೆ ಮೆರವಣಿಗೆ ನಡೆಸಿವೆ. ಈ ನಡುವೆ ಬುಧವಾರ ರಾತ್ರಿ ಯುವಜನ ಪಕ್ಷಗಳು ನಡೆಸಿದ ಪ್ರತಿಭಟನಾ ಜಾಥಾ ತೀವ್ರ ಸ್ವರೂಪ ಪಡೆದುಕೊಂಡಿದೆ. ಶುಲ್ಕ ವಸೂಲು ರದ್ದುಗೊಳಿಸುವ ತನಕ ಹೋರಾಟ ಮುಂದುವರಿಯಲಿದೆ ಎಂದು ಸಮಿತಿ ಮುನ್ನೆಚ್ಚರಿಕೆ ನೀಡಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ದಿವ್ಯಜ್ಯೋತಿ ಕ್ರಿಕೆಟರ್ಸ್‌ನ 20ನೇ ವರ್ಷದ ಕಲಾ ಕಾಣಿಕೆ

August 12, 2026

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆ ವಿಚಾರ: ಮತ್ತೆ ಉಳ್ಳಾಲಕ್ಕೆ ಮರು ನೇಮಕ

August 12, 2026

Comments are closed.

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ದಿವ್ಯಜ್ಯೋತಿ ಕ್ರಿಕೆಟರ್ಸ್‌ನ 20ನೇ ವರ್ಷದ ಕಲಾ ಕಾಣಿಕೆ

By UllalaVaniAugust 12, 20260

ಕುತ್ತಾರು: ಕುತ್ತಾರು ಪಂಡಿತ್ ಹೌಸ್ ದಿವ್ಯಜ್ಯೋತಿ ಕ್ರಿಕೆಟರ್ಸ್ ಹಾಗೂ ದಿವ್ಯಜ್ಯೋತಿ ಮಹಿಳಾ ವಿಭಾಗದ ವತಿಯಿಂದ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿ…

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ್ ಸಾಮಣಿಗೆ ಅವರನ್ನು ಅಭಿನಂದಿಸಿದ ಸಚಿವ ಯು.ಟಿ. ಖಾದರ್

August 12, 2026

ಉಳ್ಳಾಲ ಪೌರಾಯುಕ್ತ ಸಂತೋಷ್ ವರ್ಗಾವಣೆ ವಿಚಾರ: ಮತ್ತೆ ಉಳ್ಳಾಲಕ್ಕೆ ಮರು ನೇಮಕ

August 12, 2026

ಕೇಂದ್ರ ಸರಕಾರ ಕಾರ್ಪೊರೇಟ್ ಸಂಸ್ಥೆಗಳ ಕಾವಲಾಗುವ ಮೂಲಕ ಯುವಜನತೆಗೆ ದ್ರೋಹ ಬಗೆಯುತ್ತಿದೆ : ಡಿವೈಎಫ್‌ಐ ಕೇರಳ‌ ನಾಯಕ ವಿಪಿಪಿ ಮುಸ್ತಫಾ

August 12, 2026
1 2 3 … 2,057 Next
Automatic YouTube Gallery

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಸೀಫ್ ಸಾಮಣಿಗೆ ಆಯ್ಕೆ ಇಂದಿನ (12.8.2026 ) Highlights

ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯ ಆಸೀಫ್ ಸಾಮಣಿಗೆ ಅಭಿನಂದಿಸಿ ಸನ್ಮಾನಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಸೀಫ್ ಸಾಮಣಿಗೆ ಆಯ್ಕೆ ಇಂದಿನ (12.8.2026 ) Highlights
Now Playing
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಸೀಫ್ ಸಾಮಣಿಗೆ ಆಯ್ಕೆ ಇಂದಿನ (12.8.2026 ) Highlights
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯ ಆಸೀಫ್ ...
ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯ ಆಸೀಫ್ ಸಾಮಣಿಗೆ ಅಭಿನಂದಿಸಿ ಸನ್ಮಾನಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್
Now Playing
ಆಟಿ ತಿಂಗಳಿಗೂ ತುಳುವರಿಗೂ ಅವಿನಾಭಾವ ಸಂಬoಧ-ಉಪನ್ಯಾಸಕಿ ಪಲ್ಲವಿ ರಾಜೇಶ್
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ...
ದೇವಾಡಿಗ ಸಮಾಜ ಸೇವಾ ಸಂಘ ಪಾವಂಜೆ ವತಿಯಿಂದ `ಆಟಿಡೊಂಜಿ ಐತಾರ'; ಕಾರ್ಯಕ್ರಮ ಉದ್ಘಾಟಿಸಿದ ಸಾಮಾಜಿಕ ಕಾರ್ಯಕರ್ತ ಅಶೋಕ್
"ತುಳುವರಿಗೂ ಪ್ರಕೃತಿಗೂ ಅವಿನಾಭಾವ ಸಂಬoಧ"-ಉಪನ್ಯಾಸಕಿ ಪಲ್ಲವಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version