Site icon Ullalavani

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; 3 ಲಕ್ಷ ರೂ. ನಷ್ಟ

ಕಾರ್ಕಳ, ಜ. 16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ.

ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದೆ.ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

Exit mobile version