Site icon Ullalavani

ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಕಾರ್ಯಾಗಾರ , ಸನ್ಮಾನ ಕಾರ್ಯಕ್ರಮ

ಉಳ್ಳಾಲ, ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢ ಶಾಲೆ ವಿದ್ಯಾನಗರ ತಲಪಾಡಿ ಇದರ ಆಶ್ರಯದಲ್ಲಿ ಪೋಷಕರ ಸಭೆ, ಪ್ರತಿಭಾ ಪುರಸ್ಕಾರ, ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಕಾರ್ಯಾಗಾರ ಹಾಗೂ ಸನ್ಮಾನ ಕಾರ್ಯಕ್ರಮವು ಫಲಾಹ್ ಹೊರಾಂಗಣ ವೇದಿಕೆಯಲ್ಲಿ ನಡೆಯಿತು.


ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣಾ ನಿರೀಕ್ಷಕ ಕೃಷ್ಣಾನಂದ ಜಿ.ನಾಯಕ್ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಮೂಡಿಸುವ ಬಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ವಾಹನ ನೀಡದಂತೆ ಪೋಷಕರಿಗೆ ಸೂಚನೆ ನೀಡಿದರು.
ಫಲಾಹ್ ವಿದ್ಯಾ ಸಂಸ್ಥೆ ಅಧ್ಯಕ್ಷ ಯು.ಬಿ.ಮೊಹಮ್ಮದ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ತಲಪಾಡಿ ವಲಯ ಸಿಆರ್ ಪಿ ಸುಜಾತಾ ಮಾತನಾಡಿದರು.


ಈ ಸಂದರ್ಭದಲ್ಲಿ ಉಳ್ಳಾಲ ತೋಟ ಯು.ಟಿ. ಅಬ್ದುಲ್ ರಹೀಮ್ ಅವರನ್ನುಸನ್ಮಾನಿಸಲಾಯಿತು. ಅತ್ಯಧಿಕ ಅಂಕಗಳನ್ನು ಪಡೆದ ಹಾಗೂ ಕೃಷಿ ಬೆಳೆಗಳನ್ನು ಶಾಲಾ ವಠಾರದಲ್ಲಿ ಬೆಳೆಸುವಲ್ಲಿ ಉತ್ತೇಜನ ನೀಡಿದ ಫಲಾಹ್ ಶಾಲೆಯ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು . ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.


ಈ ಕಾರ್ಯಕ್ರಮ ದಲ್ಲಿ ಫಲಾಹ್ ವಿದ್ಯಾ ಸಂಸ್ಥೆ ಕೋಶಾಧಿಕಾರಿ ಹಾಜಿ ಅಬ್ಬಾಸ್ ಮಜಲ್, ಪ್ರಧಾನ ಕಾರ್ಯದರ್ಶಿ ಹಾಜಿ ಎನ್.ಅರಬಿ ಕುಂಞಿ, ಬಶೀರ್ ತಲಪಾಡಿ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕಿ ಚಂದ್ರಕಲಾ ಎಮ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಮೊಹಮ್ಮದ್ ರಫೀಕ್ ಸ್ವಾಗತಿಸಿ, ವಂದಿಸಿದರು.

Exit mobile version