ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ : ಗ್ರಾಮೀಣ ಪ್ರದೇಶಕ್ಕೆ ವೈದ್ಯಕೀಯ ಸವಲತ್ತು ನೀಡುವುದರೊಂದಿಗೆ, ಜನರಲ್ಲಿ ವೈದ್ಯಕೀಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಯೋಜನೆಯನ್ನು ರೂಪಿಸಿ ಕಾರ್ಯಗತಗೊಳಿಸುತ್ತಿದ್ದು, ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು ಎಂದು ದೇರಳಕಟ್ಟೆ ಕಣಚೂರು ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ ಇದರ ಅಧ್ಯಕ್ಷ ಯು.ಕಣಚೂರು ಮೋನು ತಿಳಿಸಿದರು.
ದೇರಳಕಟ್ಟೆ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕುತ್ತಾರು ಬಟ್ಟೆದಡಿ ಜೈ ಹನುಮಾನ್ ಕ್ರೀಡಾ ಮಂಡಳಿ ಇದರ ಆಶ್ರಯದಲ್ಲಿ ಮುನ್ನೂರು ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಉಚಿತ ವೈದ್ಯಕೀಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯದ ಕುರಿತು ಸಿಸ್ಟರ್ ಶಕುಂತಳಾ ಮಾಹಿತಿ ನೀಡಿದರು.
ಮಹಾಬಲ ದೆಪ್ಪಲಿಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜೀವನ್‍ರಾಜ್ ಕುತ್ತಾರ್ ವಂದಿಸಿದರು.