ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕಲ್ಲಾಪು: ಕಾರೊಂದು ಡಿವೈಡರ್‍ಗೆ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿ ಭಾನುವಾರ ನಡೆದಿದ್ದು ಗಂಭೀರ ಗಾಯಗೊಂಡವರನ್ನು ಕೋಟೆಕಾರು ನಿವಾಸಿ ಅಶೋಕ್ (54)ಹಾಗೂ ಗೀತಾ(52) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದಾಗ ಕಲ್ಲಾಪು ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅಶೋಕ್ ನೀಡಿದ ದೂರಿನ ಮೇರೆಗೆ ಕಾರು ಚಾಲಕ ವಿಜೇತ್‍ನ ವಿರುದ್ಧ ಪ್ರಕರಣ ದಾಖಲಾಗಿದೆ.


