ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ತೀವ್ರ ರಕ್ತದೊತ್ತಡದಿಂದ ನಗರದ ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ನಗರದ ಸಶಸ್ತ್ರ ನಗರ ಮೀಸಲು ಪಡೆ (ಸಿಎಆರ್)ನಲ್ಲಿ ಕಳೆದ ಆರು ವರ್ಷಗಳಿಂದ ಸಿಬ್ಬಂದಿಯಾಗಿ ಸಂಚಾರಿ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕದ್ರಿ ಠಾಣೆ ಸೇರಿದಂತೆ ನಗರದ ಸಿಎಆರ್ ಕಚೇರಿಯಲ್ಲಿ ಹೆಚ್ಚಾಗಿ ಕರ್ತವ್ಯ ನಿರ್ವಹಿಸಿದ್ದರು.
2016ರ ನೇ ಬ್ಯಾಚ್ ಸಿಬ್ಬಂದಿಯಾಗಿದ್ದ ಇವರ, ಪತ್ನಿಯೂ ಪೊಲೀಸ್ ಸಿಬ್ಬಂದಿ ಆಗಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಾತ್ರಿ ಪಾಳಯದ ಕರ್ತವ್ಯ ನಿರ್ವಹಿಸಿ ಬಿಕರ್ನಕಟ್ಟೆಯಲ್ಲಿರುವ ಮನೆಗೆ ವಾಪಸ್ಸಾಗಿದ್ದ ಇವರು, ಎದೆ ನೋವು ಕಾಣಿಸಿ ಮಲಗಿದ್ದರು. ಬಳಿಕ ಮನೆಮಂದಿ ನಗರದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ತೀವ್ರ ರಕ್ತದೊತ್ತಡ ಕಾಣಿಸಿಕೊಂಡು ಎರಡು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಿಧನರಾಗಿದ್ದಾರೆ.
ಸಂಚಾರಿ ಠಾಣೆಯಲ್ಲಿ ಹಲವು ವರ್ಷಗಳಿಂದ ಇರುವ ಅಧಿಕಾರಿ ಗೋಪಾಲಕೃಷ್ಣ ಭಟ್ ಅವರ ಜೀಪ್ ನಲ್ಲಿ ಹೆಚ್ಚು ಕರ್ತವ್ಯ ನಿರ್ವಹಿಸಿದ್ದರು.




