ಉಳ್ಳಾಲ: 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಳ್ಳಾಲ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಲಾಗಿದೆ.
ಉಳ್ಳಾಲ ಮುಕ್ಕಚ್ಚೇರಿಯ ಮೊಹಮ್ಮದ್ ಸಂಶೀರ್ ಎಂಬವರನ್ನು ಬಂಧಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ 2011 ರಲ್ಲಿ ಮಾದಕ ವ್ಯಸನಗಳಿಗೆ ಸಂಬಂಧಿಸಿದ ಪ್ರಕರಣ ಈತನ ಮೇಲಿದ್ದು, ನ್ಯಾಯಾಲಯವು ಆರೋಪಿತನಿಗೆ ಎಲ್ ಪಿಸಿ ವಾರಂಟ್ ಹೊರಡಿಸಿತ್ತು. ಇದೀಗ 14 ವರ್ಷಗಳ ನಂತರ ಆರೋಪಿಯನ್ನು ಬಂಧಿಸಲಾಗಿದೆ.