Site icon Ullalavani

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!


ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.


ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್ ಯಾನೆ ಅನ್ವರ್‌ ಹುಸೈನ್‌ (42) ಬಂಧಿತ. ತಡೆದು ಹಣದ ಬೆದರಿಕೆ, ಅವಮಾನಿಸಿದ ಹಿನ್ನೆಲೆಯಲ್ಲಿ 2007 ರಲ್ಲಿ ಐಪಿಸಿ 341, 384, 504, 506 ರ ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಜೆಎಂಎಫ್‌ ಸಿ ಮೂರನೇ ನ್ಯಾಯಾಲಯಕ್ಕೆ ಹಾಜರಾಗದೇ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದವನನ್ನು ಉಳ್ಳಾಲ ಪೊಲೀಸರು ಬಂಧಿಸದ್ದಾರೆ.

Exit mobile version