Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಬಾಳೆಪುಣಿಯಲ್ಲಿ ಸ್ವಚ್ಛೋತ್ಸವ ಹಾಗೂ ನರೇಗಾ ಗ್ರಾಮೋತ್ಸವ

UllalaVaniBy UllalaVaniFebruary 14, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಸರ್ಕಾರದ ಅನೇಕ ಮಹತ್ವಪೂರ್ಣವಾದ ಯೋಜನೆಗಳ ಸಮರ್ಪಕ ಸದ್ಭಳಕೆಯನ್ನು ಮಾಡುವ ಮೂಲಕ ಎಷ್ಟೋ ಜನರು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಕರ್ನಾಟಕ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್ ಗಟ್ಟಿ ಹೇಳಿದರು.

ಅವರು ಗುರುವಾರ ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಉಳ್ಳಾಲ, ಬಾಳೆಪುಣಿ ಗ್ರಾಮ ಪಂಚಾಯತ್ ಇದರ ವತಿಯಿಂದ ಸ್ವಚ್ಛೋತ್ಸವ, ನರೇಗಾ ಗ್ರಾಮೋತ್ಸವ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ -50 ವರ್ಷ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಚ್ಛ ಗ್ರಾಮವಾಗಿ ಬಾಳೆಪುಣಿ ಗ್ರಾಮ ಪಂಚಾಯತ್ ಮಾದರಿಯಾಗಿದೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರ ಪಡೆದುಕೊಂಡಿದೆ. ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯೂ ಸಾಧ್ಯ ಎಂದರು.

ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಅವರು ಮಾತನಾಡಿ, ಕಾರ್ಯಯೋಜನೆಗಳನ್ನು ಎಸಿ ರೂಮುನೊಳಗೆ ಕೂತು ನಿರ್ಧರಿಸಿದರೆ ಯಶಸ್ಸು ಆಗಲು ಸಾಧ್ಯವಿಲ್ಲ. ಅಧಿಕಾರಿಗಳೊಂದಿಗೆ ಜನರು ಸಂಪೂರ್ಣವಾಗಿ ಯೋಜನೆಯಲ್ಲಿ ಭಾಗವಹಿಸಿ ತೊಡಗಿಸಿಕೊಂಡರೆ ಮಾತ್ರ ಇದು ಯಶಸ್ವಿಯಾಗಲು ಸಾಧ್ಯ. ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸ ಸ್ಥಳಗಳಿಗೆ ಕರೆದುಕೊಂಡು ಹೋಗುವಂತೆಯೇ ಅವರಿಗೆ ಸ್ವಚ್ಚ ಘಟಕಗಳನ್ನೂ ತೋರಿಸಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.

ನರೇಗಾ ಯೋಜನಾಧಿಕಾರಿ ಜಯರಾಮ್ ಸ್ವಚ್ಛ ಮನೆ ಘೋಷಣಾ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ, ದೂರದೃಷ್ಟಿಕೋನ ಇಟ್ಟುಕೊಂಡು ನಾವು ಕಾರ್ಯಪ್ರವೃತ್ತರಾದರೆ ಯಶಸ್ಸು ಸಾಧ್ಯ. ಸರ್ಕಾರದ ಯೋಜನೆಗಳನ್ನು, ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಲೆಕ್ಕಸಹಾಯಕರಾಗಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡ ರುಕ್ಮನ್ ದಾಸ್, ಆರೋಗ್ಯ ಸಹಾಯಕಿಯಾಗಿ ವರ್ಗಾವಣೆಗೊಂಡ ನಳಿನಾಕ್ಷಿ ಲಿಂಗಪ್ಪ, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಪುಷ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಶೈಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಕಪಾಟು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದರ ಗೀತಾ ಭಂಡಾರಿ,ಉಪಾಧ್ಯಕ್ಷರಾದ ಸಿ.ಎಂ. ಶರೀಫ್ ಚೆಂಬೆತೋಟ, ಉದ್ಯಮಿ ನಾಸೀರ್ ಎನ್ ಎಸ್ ನಡುಪದವು, ಮಾಜಿ ತಾಲೂಕು ಪಂಚಾಯತ್ ಸದಸ್ಯ ಹೈದರ್ ಕೈರಂಗಳ, ಮಾಜಿ ಅಧ್ಯಕ್ಷ ಬಶೀರ್ , ಹಿರಿಯ ಸದಸ್ಯ ಬಾಸ್ಕರ ಕೋಟ್ಯಾನ್, ದ.ಕ‌.ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ಸದಸ್ಯರಾದ ಅಬ್ದುಲ್ ರಹಿಮಾನ್, ಅಬ್ಬಾಸ್, ಸುಜಾತ, ದೊಂಬಯ್ಯ , ಸುನೀಲ್, ಸಾವಿತ್ರಿ, ಅಂಜಲಿ, ಸುಮನಾ ಕ್ರಾಸ್ತಾ, ಅಬ್ದುಲ್ ರಹಿಮಾನ್, ಗುರುರಾಜ್ ಭಟ್, ಶಶಿಧರ್, ಮಾಜಿ ಅಧ್ಯಕ್ಷರಾದ ಸುಕನ್ಯಾ ರೈ, ಜೊಹರಾ, ಯಾಕೂಬ್ ಮೊದಲಾದವರು ಉಪಸ್ಥಿತರಿದ್ದರು ಕಾರ್ಯದರ್ಶಿ ಆಯಿಷಾ ಬಾನು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಅವರು ಸ್ಬಾಗತಿಸಿದರು. ಉಪಾಧ್ಯಕ್ಷರಾದ ಸಿ.ಎಂ.ಶೆರೀಫ್ ವಂದಿಸಿದರು. ಸದಾನಂದ ಹಾಗೂ ಮಂಜಪ್ಪ ಅವರು ಕಾರ್ಯಕ್ರಮ ನಿರೂಪಿಸಿದರು.

ಸಾವಯವ ಬಾಟಲಿ ಹಾಗೂ ಸಾವಯವ ಕೈಚೀಲ ಬಿಡುಗಡೆ:

ಬಾಳೆಪುಣಿಯಲ್ಲಿ ನಡೆದ ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಮೆಲ್ವಿನ್ ಅರುಣ್ , ಕವಿತಾ ದಂಪತಿಗಳು ಕಬ್ದು, ಜೋಳ ಮೊದಲಾದ ಸಾವಯವ ಪದಾರ್ಥಗಳನ್ನು ಬಳಸಿ ತಯಾರಿಸಿದ ಸಾವಯವ ನೀರಿನ ಬಾಟ್ಲಿ ಹಾಗೂ ಸಾವಯವ ಪ್ಲಾಸ್ಟಿಕ್ ಚೀಲ, ಸಾವಯವ ನರ್ಸರಿ ಚೀಲವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಿ ಸಾರ್ವಜನಿಕರಿಗೆ ಮಾಹಿತಿ‌ ನೀಡಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

August 6, 2026

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ

August 6, 2026

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ

August 6, 2026

Comments are closed.

Advertise
ಸಂಪರ್ಕಿಸಿ

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026
suddi

ಕರ್ನಾಟಕದಲ್ಲಿ ಅಡಿಕೆ ಉತ್ಪಾದನೆ, ಉತ್ಪಾದಕತೆ ಭಾರೀ ಕುಸಿತ! ಕಾರಣವೇನು?

By UllalaVaniAugust 6, 20260

ನವದೆಹಲಿ, ಆಗಸ್ಟ್ 6: ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಗಣನೀಯವಾಗಿ ವಿಸ್ತರಣೆಯಾಗಿದೆ. ಆದರೆ, ಇದೇ ಅವಧಿಯಲ್ಲಿ ಅಡಿಕೆ…

ಪುತ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಮತ್ತೆ ವಿವಾದ: 30 ಕೋಟಿ ರೂ. ಮೌಲ್ಯದ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಭಕ್ತರ ವಿರೋಧ, ಶಾಸಕರ ನಡೆಗೆ ಆಕ್ರೋಶ

August 6, 2026

ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಿಚ್ಚಿಟ್ಟ ಕಿಮ್ಸ್ ಸಂಸ್ಥೆ ವೈದ್ಯರ ತಂಡ

August 6, 2026

ಕೃತಕ ಫ್ಲೇವರ್ ಬಳಕೆ: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ‍್ಯಾಂಡ್ ಬ್ಯಾನ್ ಮಾಡಿದ FSSAI

August 6, 2026
1 2 3 … 2,049 Next
Automatic YouTube Gallery

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ

ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅನಧಿಕೃತ ಅಂಗಡಿಗಳ ತೆರವು ಆರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
Now Playing
ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು ...
ವ್ಯಾಪಾರಸ್ಥರ ಮನವಿಗೆ ಎರಡು ಗಂಟೆ ಅವಕಾಶ;ಬಳಿಕ ಸ್ವಯಂಪ್ರೇರಿತವಾಗಿ ಅಂಗಡಿ ತೆರವು

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅನಧಿಕೃತ ಅಂಗಡಿಗಳ ತೆರವು ಆರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
Now Playing
ಚಿರತೆಗೆ ಕೋಳಿಗಳು, ನಾಯಿಗಳೇ ಆಹಾರ..!; ಸಿಸಿಟಿವಿ ದೃಶ್ಯ
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version