ಸುಳ್ಯ, ಫೆ. 20; ಬೆಳ್ಳಾರೆ ಸೋಣಂಗೇರಿ ರಸ್ತೆಯ ಬಂಡಿ ಮಜಲು ಎಂಬಲ್ಲಿ ಲಾರಿಯಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ವೇಳೆ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಮತ್ತು ಸಿಬಂದಿ ಪತ್ತೆ ಹಚ್ಚಿದ್ದು, ಅಕ್ರಮ ಸಾಗಾಟಕ್ಕೆ ಬಳಸಿದ ಲಾರಿ ಮತ್ತು ದಿಮ್ಮಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದವರು ಸಾಗಾಟಕ್ಕೆ ಬಳಸಿದ್ದ ಲಾರಿ ಮತ್ತು ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೊತ್ತಿನ ಮೌಲ್ಯ 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮದನ್ ಎಂ. ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.