ಮಂಗಳೂರು : ಫೆ.24ರಂದು ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ. ಅದೇ ದಿನ ಎಸ್ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಂದ ಉದ್ಘಾಟನೆಗೊಳ್ಳಲಿದೆ. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದಾರೆ.ಕರ್ನಾಟಕ ಸರ್ಕಾರದ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಡಾ|ಎಂ. ವೀರಪ್ಪ ಮೊಯಿಲಿ ಅವರು ಡಾ।ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಿ, ಅಭಿವಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ಡಾರೆ.




