Site icon Ullalavani

ಆಟವಡುತ್ತಿದ್ದಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿಯೋರ್ವಳು ಮೃತ್ಯು…!!

ಉಳ್ಳಾಲ: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗುವೊಂದು ಆಟದಲ್ಲಿ ಬಳಸಲಾಗುವ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೂಲತ: ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ,ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ.ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು.

ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.ಈ ವೇಳೆ ತನುಷ್ಕ ಲೂಡೊ ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಏಕಾ ಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಭರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.ಬಾಲಕಿಯ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಆಟಿಕೆ ಲಭಿಸಿದೆ.ಮೃತ ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬೆಸ್ಟಿಯನ್ ಹೈಸ್ಕೂಲ್ನ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು.

ಆಕೆಯ ಧಿಡೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.

Exit mobile version