Site icon Ullalavani

ವಿದ್ಯುತ್ ಆಘಾತಕ್ಕೊಳಗಾಗಿ ಯುವಕ ದಾರುಣ ಸಾವು…!

ಉಳ್ಳಾಲ: ನೂತನ ವಸ್ತ್ರಮಳಿಗೆಯೊಂದನ್ನ ತೆರೆಯುವ ಸಂಭ್ರಮದಲ್ಲಿದ್ದ ಯುವಕನೋರ್ವ ಅದೇ ಮಳಿಗೆಯಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತ ಪಟ್ಟಿರುವ ದಾರುಣ ಘಟನೆ ತೊಕ್ಕೊಟ್ಟುವಿನ ಹೃದಯಭಾಗದಲ್ಲಿ ನಡೆದಿದೆ.


ಮೂಲತ: ಪಜೀರು ಬೆಂಗೋಡಿ ಪದವು ನಿವಾಸಿ,ಸದ್ರಿ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿರುವ ಸಲ್ಮಾನ್ ಫಾರಿಶ್(20) ಮೃತ ಯುವಕ. ತೊಕ್ಕೊಟ್ಟಿನ ಸ್ಮಾರ್ಟ್ ಸಿಟಿ ವಾಣಿಜ್ಯ ಮಳಿಗೆಯಲ್ಲಿ ಸಲ್ಮಾನ್ ಫಾರಿಶ್ ಮಾಲಕತ್ವದಲ್ಲಿ ನೂತನ(ಝೀರೋ) ವಸ್ತ್ರ ಮಳಿಗೆಯೊಂದು ಇದೇ ಶುಕ್ರವಾರದಂದು ಶುಭಾರಂಭಗೊಳ್ಳಲಿದ್ದು, ಆ ನಿಟ್ಟಿನಲ್ಲಿ ನೂತನ ಮಳಿಗೆಯ ಒಳ ವಿನ್ಯಾಸ ಕಾಮಗಾರಿ ನಡೆಯುತ್ತಿತ್ತು. ಭಾನುವಾರ ರಾತ್ರಿಯೂ ಮಳಿಗೆಯ ಒಳಗಡೆ ಇಲೆಕ್ಟ್ರ್ರೀಷಿಯನ್ ಕೆಲಸ ಭರದಲ್ಲಿ ನಡೆಯುತ್ತಿತ್ತು. ಭಾನುವಾರ ನಡುರಾತ್ರಿ ಸುಮಾರು 1.30 ವೇಳೆ ಸಲ್ಮಾನ್ ಗೆ ವಿದ್ಯುತ್ ಆಘಾತವಾಗಿದ್ದು,ಮಳಿಗೆಯೊಳಗಿದ್ದ ಕಾರ್ಮಿಕರು ಕೂಡಲೇ ಆತನನ್ನ ಆಟೋ ರಿಕ್ಷಾದಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಸಹ ಆಸ್ಪತ್ರೆ ದಾರಿಯಲ್ಲಿ ಸಲ್ಮಾನ್ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version