Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಡಾ.ಎಂ.ಎನ್. ರಾಜೇಂದ್ರ ಕುಮಾರ್ ರ ಹುಟ್ಟುಹಬ್ಬ, ಅಭಿವಂದನೆ ಕಾರ್ಯಕ್ರಮ

UllalaVaniBy UllalaVaniFebruary 24, 2026No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು; ಸಹಕಾರ ರತ್ನ ಡಾ.ಎಂ.ಎನ್.ರಾಜೇoದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮದೊಂದಿಗೆ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಸಹಕಾರಿ ರಂಗದಲ್ಲಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪರಿಶ್ರಮ ಛಲದಿಂದ ಮಾಡಿದ ಸಾಧನೆ, ಸಹಕಾರಿ ಬ್ಯಾಂಕ್ ಅನ್ನು ರಾಷ್ಟçಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಅವರಿಗೆ ಸಲ್ಲುತ್ತದೆ. ಇಂತಹ ಸಾಧಕರಿಗೆ ಸನ್ಮಾನ ಮಾಡುವುದರಿಂದ ಭವಿಷ್ಯದಲ್ಲಿ ಈ ರೀತಿಯ ಸಾಧನೆಗೈಯಲು ಯುವಜನರಿಗೆ ಪ್ರೇರಣೆ ಆಗಲಿದೆ. ಅವರ ನೇತೃತ್ವದಲ್ಲಿ ಸಹಕಾರ ರಂಗ ಇನ್ನಷ್ಟು ಎತ್ತರಕ್ಕೆ ಏರುವಂತಾಗಲಿ ಎಂದು ಶುಭಹಾರೈಸಿದರು.

ಅಭಿವಂದನಾ ಭಾಷಣ ಮಾಡಿದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸಹಕಾರಿ ರಂಗದ ಸ್ಥಾನಕ್ಕೆ ಡಾ.ಎಂ.ಎನ್.ರಾಜೇAದ್ರ ಕುಮಾರ್ ನ್ಯಾಯ ಒದಗಿಸಿ ದಾಖಲೆ ನಿರ್ಮಿಸಿದ್ದಾರೆ. ಜೊತೆಗೆ ಸಾಕಷ್ಟು ಪ್ರತಿಭಾವಂತರನ್ನು ಬೆಳೆಸಿದ್ದಾರೆ ಸರ್ವರಿಗೆ ಸಮಬಾಳು ಸರ್ವರಿಗೂ ಸಮಪಾಲು ಎಂಬ ಧೈಯದೊಂದಿಗೆ ನೆಹರು ಅವರ ಸಹಕಾರಿ ರಂಗದ ಯೋಜನೆಯಂತ ಸಹಕಾರ ರಂಗವನ್ನು ಮುನ್ನಡೆಸಿದ್ದಾರೆ. ಅವರ 45 ವರ್ಷಗಳ ಸಹಕಾರ ರಂಗದ ಸಾಧನೆಯತ್ತ ಕಣೋಟ ಕರಿಸಿದಾಗ, ದೇಶದ ಬ್ಯಾಂಕ್ ಕ್ಷೇತ್ರದಲ್ಲಿ ಧ್ರುವ ತಾಲೆಯಂತೆ ಕಂಗೊಳಿಸಿದವರು, ಸಹಕಾರಿ ರಂಗದ ಮೂಲಕ ಸಾಮಾಜಿಕ ‘ನ್ಯಾಯಕ್ಕೆ ಕೊಡುಗೆ ನೀಡಿದವರು ಕರಾವಳಿಯಲ್ಲಿ ಹಲವಾರು ಬ್ಯಾಂಕ್ ಗಳನ್ನು ಸ್ಥಾಪಿಸಿದ ಸಾಧನೆಯಂತೆ ಅಂತಹ ಸಾಧಕ ಮಹಾನುಭಾವರ ಸಾಲಿನಲ್ಲಿ ರಾಜೇಂದ್ರ ಕುಮಾರ್ ನಿಲ್ಲುತ್ತಾರೆ ಎಂದು ಅಭಿಪ್ರಾಯಿಸಿದರು.

64 ಕೋಟಿ ರೂ ಠೇವಣಿಯಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ಗ 7000 ಕೋಟಿ ರೂಗೂ ಅಧಿಕ ಠೇವಣಿ ಸಂಗ್ರಹ ಮಾಡಲು ಸಾಧ್ಯ ವಾಗಿದೆ. ಬ್ಯಾಂಕ್ 25 ಶಾಖೆಗಳಿಂದ 113 ಶಾಖೆಗಳಿಗೆ ಏರಿಕೆ ಯಾಗಿದೆ ಸಹಕಾರಿ ರಂಗದ ಬೆಳವಣಿಗೆಗೆ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿದ ಡಾ.ಎಂ.ಎಸ್ ರಾಜೇಂದ್ರ ಕುಮಾರ್ ಮಾತನಾಡಿ ದೇಶದ 459 ಜಿಲ್ಲಾ ಸಹಕಾರಿ ಬ್ಯಾಂಕುಗಳ ಪೈಕಿ ಎಸ್.ಸಿ ಡಿಸಿಸಿ ಬ್ಯಾಂಕ್ ಪ್ರಥಮ ಸ್ಥಾನದಲ್ಲಿ ಇದೆ ಎನ್ನುವ ಬಗ್ಗೆ ನಬಾರ್ಡ್ ನೀಡಿದ ಗೌರವ ತನಗೆ ತೃಪ್ತಿ ನೀಡಿದೆ ಎಂದರು.

ದೇಶದ ರಾಷ್ಟ್ರೀಕೃತ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳು ವಿಲೀನ ಗೊಳ್ಳುತ್ತಿ ರುವ ಸಂದರ್ಭದಲ್ಲಿ ಸಹಕಾರಿ ಬ್ಯಾಂಕ್ ಗ್ರಾಮೀಣ ಪ್ರದೇಶಗಳಲ್ಲಿ ಶಾಖೆ ಆರಂಭಿಸಿ ಸೇವೆ ನೀಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ನೀಡದೆ ಇದ್ದ ಸಾಲದ ಸಹಾಯವನ್ನು ಸಹಕಾರಿ ಬ್ಯಾಂಕುಗಳು ಕ್ಲಪ್ತ ಸಮಯದಲ್ಲಿ ನೀಡಿವೆ ರಾಜ್ಯದ ಲಕ್ಷಾಂತರ ರೈತರಿಗೆ ಸಹಾಯ ಮಾಡಿದ್ದೇವೆ. ಜಿಲ್ಲಾ ಬ್ಯಾಂಕ್ ಗಳಿಗಿಂತ ಹೆಚ್ಚು ಲಾಭ ಪತ್ತಿನ ಸಹಕಾರಿ ಬ್ಯಾಂಕುಗಳ ಮೂಲಕ ನಡೆಯುತ್ತಿದೆ 9 ಜಿಲ್ಲೆಗಳಲ್ಲಿ ನವೋದಯ ಸ್ವ ಸಹಾಯ ಗುಂಪುಗಳ ಮೂಲಕ ” ಮಹಿಳೆಯರಿಗೆ ಆರ್ಥಿಕ ಸಹಕಾರ ಸ್ವಾವಲಂಬನೆಗೆ ಸಹಕಾರ ನೀಡಿದೆ ಎಂದರು

ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕೊರೋನ ಸಂದರ್ಭದಲ್ಲಿ ಜಿಲ್ಲಾಡಳಿತದ ಜೊತೆ. ಎಸ್ ಸಿಡಿಸಿಸಿ ಬ್ಯಾಂಕ್ ನೀಡಿದ ಸಹಕಾರ ಮರೆಯಲು ಸಾಧ್ಯವಿಲ್ಲ ಸಹಕಾರಿ ರಂಗದ ಮೂಲಕ ಬ್ಯಾಂಕ್ ಸೇವೆಯನ್ನು ಮನೆ ಮನೆಗೆ ಮುಟ್ಟಿಸಿದ ಕೀರ್ತಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಗೆ ಸಲ್ಲುತ್ತದೆ ಎಂದರು.

ಸ್ವಾಗತ ಭಾಷಣ ಮಾಡಿದ ಅಭಿನಂದನಾ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಅನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ರಾಷ್ಟ್ರ ಮಟ್ಟದಲ್ಲೂ ಗುರುತಿಸಿ ಕೊಂಡಿರುವ ಅವರ 77ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳ ತೀರ್ಮಾನ ಎಂದರು.

ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊAದಿಗೆ ಆವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ ನಮಗೆಲ್ಲರಿಗೂ ಮಾರ್ಗ ದರ್ಶಕರಾಗಿದ್ದಾರೆ ಎಂದರು.

ಸಮಾರAಭದಲ್ಲಿ ನಬಾರ್ಡ್ ಡಿಜಿಎಂ ಜಗದೀಶ್, ದ.ಕ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ದೇವರಾಜ್, ರಾಜ್ಯ ಸಹಕಾರಿ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜು, ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಗೊಟ್ಟು ಎಸ್.ಬಿ.ಜಯರಾಮ್ ರೈ ಸದಾಶಿವ ಉಳ್ಳಾಲ್ ಮೋನಪ್ಪ ಶೆಟ್ಟಿ ಎಕ್ಕಾರು, ವಾದಿರಾಜ ಶೆಟ್ಟಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಕಣಚೂರು ಮೋನು ನವೋದಯ ಬ್ಯಾರಿ ಟೇಬಲ್ ಟ್ರಸ್ಟ್ ಅಧ್ಯಕ್ಷ ಮೇಘರಾಜ ಜೈನ್, ಆಕಾಶ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುನಿರಾಜು, ಬ್ಯಾಂಕಿನ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಕಟೀಲು ಕ್ಷೇತ್ರದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಆಶೀರ್ವಚನ ನೀಡಿದರು. ನಿತೇಶ್ ಶೆಟ್ಟಿ ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಾಂಗ್ರೆಸ್ ಪಕ್ಷದ ಬಿಎಲ್‌ಒ ಆಯ್ಕೆ ಬಗ್ಗೆ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಸಭೆ

February 24, 2026

ಉಳ್ಳಾಲವಾಣಿ ವರದಿ ಫಲಶ್ರುತಿ; ನಾಯಿ ದಾಳಿಗೆ ಬಲಿಯಾದ ದಯಾನಂದ ಕುಟುಂಬಕ್ಕೆ 5 ಲಕ್ಷ ಪರಿಹಾರ

February 24, 2026

ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ

February 23, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಡಾ.ಎಂ.ಎನ್. ರಾಜೇಂದ್ರ ಕುಮಾರ್ ರ ಹುಟ್ಟುಹಬ್ಬ, ಅಭಿವಂದನೆ ಕಾರ್ಯಕ್ರಮ

By UllalaVaniFebruary 24, 20260

ಮಂಗಳೂರು; ಸಹಕಾರ ರತ್ನ ಡಾ.ಎಂ.ಎನ್.ರಾಜೇoದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮದೊಂದಿಗೆ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕಾಂಗ್ರೆಸ್ ಪಕ್ಷದ ಬಿಎಲ್‌ಒ ಆಯ್ಕೆ ಬಗ್ಗೆ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಸಭೆ

February 24, 2026

ಉಳ್ಳಾಲವಾಣಿ ವರದಿ ಫಲಶ್ರುತಿ; ನಾಯಿ ದಾಳಿಗೆ ಬಲಿಯಾದ ದಯಾನಂದ ಕುಟುಂಬಕ್ಕೆ 5 ಲಕ್ಷ ಪರಿಹಾರ

February 24, 2026

ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ ಕೊರಗಜ್ಜನಿಗೆ ದೊಂದಿ ಬೆಳಕಿನ ಕೋಲ ಸೇವೆ

February 23, 2026
1 2 3 … 1,811 Next
Automatic YouTube Gallery

ಬಿಜೆಪಿ ಸದಸ್ಯರಿಂದ ಎಸ್‌ಡಿಪಿಐ ಸದಸ್ಯರಿಗೆ ಸನ್ಮಾನ ; ಶಿಸ್ತು ಕ್ರಮವಿಲ್ಲ

ಅಂದು ಎಸ್‌ಡಿಪಿಐ ಸದಸ್ಯರಿಗೆ ಬಿಜೆಪಿ ಶಾಲು ಹೊದಿಸಿ ಸನ್ಮಾನ;ಬಿಜೆಪಿ ಸದಸ್ಯ ವಿನಯ್ ಕುಮಾರ್ ಕಂದಡ್ಕರ ಮೇಲೆ ಕ್ರಮವಿಲ್ಲ..?

ಕೋಟೆಕಾರ್ ಪ.ಪಂ ಕೌನ್ಸಿಲರ್ ಸುಜಿತ್ ಮಾಡೂರು ಮಾಡಿದ ತಪ್ಪೇನು...?
#ullalavani #news #package #latestNews #Ullala #kotekar #BJP #BJPMandala
ಬಿಜೆಪಿ ಸದಸ್ಯರಿಂದ ಎಸ್‌ಡಿಪಿಐ ಸದಸ್ಯರಿಗೆ ಸನ್ಮಾನ ; ಶಿಸ್ತು ಕ್ರಮವಿಲ್ಲ
Now Playing
ಬಿಜೆಪಿ ಸದಸ್ಯರಿಂದ ಎಸ್‌ಡಿಪಿಐ ಸದಸ್ಯರಿಗೆ ಸನ್ಮಾನ ; ಶಿಸ್ತು ಕ್ರಮವಿಲ್ಲ
ಅಂದು ಎಸ್‌ಡಿಪಿಐ ಸದಸ್ಯರಿಗೆ ಬಿಜೆಪಿ ಶಾಲು ಹೊದಿಸಿ ಸನ್ಮಾನ;ಬಿಜೆಪಿ ಸದಸ್ಯ ವಿನಯ್ ...
ಅಂದು ಎಸ್‌ಡಿಪಿಐ ಸದಸ್ಯರಿಗೆ ಬಿಜೆಪಿ ಶಾಲು ಹೊದಿಸಿ ಸನ್ಮಾನ;ಬಿಜೆಪಿ ಸದಸ್ಯ ವಿನಯ್ ಕುಮಾರ್ ಕಂದಡ್ಕರ ಮೇಲೆ ಕ್ರಮವಿಲ್ಲ..?

ಕೋಟೆಕಾರ್ ಪ.ಪಂ ಕೌನ್ಸಿಲರ್ ಸುಜಿತ್ ಮಾಡೂರು ಮಾಡಿದ ತಪ್ಪೇನು...?
#ullalavani #news #package #latestNews #Ullala #kotekar #BJP #BJPMandala
ಭಕ್ತಿಪೂರ್ವ ನಡಿಗೆಯಿಂದ ಊರಿಗೇ ಶಾಂತಿ, ನೆಮ್ಮದಿ ಲಭಿಸಲಿದೆ; ಸ್ಪೀಕರ್ ಯು.ಟಿ.ಖಾದರ್
Now Playing
ಭಕ್ತಿಪೂರ್ವ ನಡಿಗೆಯಿಂದ ಊರಿಗೇ ಶಾಂತಿ, ನೆಮ್ಮದಿ ಲಭಿಸಲಿದೆ; ಸ್ಪೀಕರ್ ಯು.ಟಿ.ಖಾದರ್
ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ; `ನಮ್ಮ ನಡಿಗೆ ಮುಡಿಪು ಪುಣ್ಯ ...
ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ; `ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ' ಜಾಥಾ

ಆಧ್ಯಾತ್ಮಿಕ ಜಾಥಾಕ್ಕೆ ಶುಭಹಾರೈಸಿದ ಸ್ಪೀಕರ್ ಯು.ಟಿ.ಖಾದರ್
#ullalavani #news #tulunad #latestnews #ullala #church #nadige #jatha
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d