Site icon Ullalavani

ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಉಳ್ಳಾಲ ತಾಲೂಕು ವತಿಯಿಂದ ಚಿತ್ರಕಲಾ ಸ್ಪರ್ಧೆ

ಹರೇಕಳ: ಭಾರತದ ಸಂವಿಧಾನ ಬರೆದಿರುವ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರ ಬಿಡಿಸುವ ಮತ್ತು ಭಾವಚಿತ್ರಕ್ಕೆ ಬಣ್ಣ ಹಚ್ಚುವ ಚಿತ್ರಕಲೆಯಲ್ಲಿ ವಿದ್ಯಾರ್ಥಿಗಳು ಉನ್ನತ ಸ್ಥಾನಮಾನ ಪಡೆದು ನಾಡಿಗೆ ಕೀರ್ತಿ ತರಬೇಕೆಂಬ ಉದ್ದೇಶ ಇಟ್ಟುಕೊಂಡು 135ನೇ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಹರೇಕಳದಲ್ಲಿ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಉಳ್ಳಾಲ ತಾಲೂಕು ವತಿಯಿಂದ ಚಿತ್ರಕಲಾ ಸ್ಪರ್ಧೆ ನಡೆಯಿತು.

ಪದ್ಮಶ್ರೀ ಪ್ರಶಸ್ತಿ ಪಡೆದ ಹಾಜಬ್ಬ ಇವರು ಕಾರ್ಯಕ್ರಮ ಉದ್ಘಾಟಿಸಿ, ಅಂಬೇಡ್ಕರ್ ರವರ ಜೀವನ ಚರಿತ್ರೆ, ಶಿಕ್ಷಣದ ಕುರಿತು ವಿದ್ಯಾರ್ಥಿಯವರಿಗೆ ಮಾಹಿತಿ ನೀಡಿದರು. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಸ್ಥಾಪಕ ಅಧ್ಯಕ್ಷರಾದ ಯಾದವ ಪ್ರಾಸ್ತವಿಕ ಮಾತುಗಳನ್ನಾಡಿದರು.

ಶಾಲಾ ಅಧ್ಯಕ್ಷರಾದ ಮೀನಝ, ಮುಖ್ಯ ಶಿಕ್ಷಕಿಯಾದ ರಾಜೇಶ್ವರಿ,ಶಾಲಾ ಶಿಕ್ಷಕಿ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.

Exit mobile version