Site icon Ullalavani

ಸಾಲೆತ್ತೂರು: ಅಕ್ರಮ ಗೋಸಾಗಾಟ; ವಾಹನ ಪೊಲೀಸರ ವಶಕ್ಕೆ..!

ಬಂಟ್ವಾಳ, ಫೆ.28: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಚೇತನ್ ಎಂಬವರನ್ನು ವಿಚಾರಿಸಿದ್ದಾರೆ. ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡೂ ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡಿಕೊಂಡು ಬಂದಿರುವುದು ಕಂಡುಬAದಿದೆ.

ಈ ಬಗ್ಗೆ ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೋರ್ವ ಚೇತನ್ ಎಂಬವರಲ್ಲಿ ವಿಚಾರಿಸಲಾಗಿ, ಚನ್ನರಾಯಪಟ್ಟಣದಿಂದ ಶಂಕರ ಎಂಬವರು ಸಾಲೆತ್ತೂರಿನ ಶಾಫಿ ಎಂಬವರಿಗೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ತುಂಬಿಸಿ ಕಳುಹಿಸಿದ್ದು, ಜಾನುವಾರುಗಳನ್ನು ಸಾಗಿಸಲು ಬೇರೆಯವರ ಹೆಸರಿನಲ್ಲಿ ದಾಖಲಾತಿಯನ್ನು ಪಡೆದು ಸಾಗಿಸುತ್ತಿರುವುದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Exit mobile version