ಮಂಗಳೂರು: ದ.ಕ,ಉಡುಪಿ ಹಾಗು ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರು ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ಮಧ್ಯೆ ನೇರ ವಿಮಾನಯಾನ ಸೇವೆಯು ಮಾ.1ರಿಂದ ಪುನರಾಂಭಗೊಳ್ಳಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟನೆ ನೀಡಿರುವ ಅವರು ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕ÷ತ್ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ತಾನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ವ್ಯವಹಾರ ನಡೆಸಿ, ವಿಮಾನಯಾನವು ಪುನಾರಂಭಿಸುವAತೆ ಮನವಿ ಮಾಡಿದ್ದೆ.
ಸದ್ಯದ ವೇಳಾಪಟ್ಟಿಯ ಪ್ರಕಾರ ವಾರದಲ್ಲಿ ಎರಡು ದಿನ ಅಂದರೆ ಪ್ರತಿ ರವಿವಾರ ಮತ್ತು ಮಂಗಳವಾರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ನಡೆಸಲಿವೆ. ಈ ನೇರ ಸೇವೆಯಿಂದಾಗಿ ಪ್ರಯಾಣದ ಸಮಯ ಉಳಿತಾಯವಾಗುದಲ್ಲದೆ ಅನಿವಾಸಿ ಭಾರತೀಯರಿಗೆ ತಮ್ಮ ಊರುಗಳಿಗೆ ನೇರವಾಗಿ ಪ್ರಯಾಣಿಸಲು ಬಹಳಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಮಂಗಳೂರು-ಮಸ್ಕತ್ ನೇರ ವಿಮಾನಯಾನ ಸೇವೆಯು ಹಠಾತ್ ಸ್ಥಗಿತಗೊಂಡ ಕಾರಣ ಮಸ್ಕತ್ನಲ್ಲಿ ನೆಲೆಸಿರುವ ಕರಾವಳಿ ಭಾಗದ ಸಾವಿರಾರು ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗಿತ್ತು. ಮಸ್ಕತ್ನಿಂದ ಮಂಗಳೂರಿಗೆ ಬರಬೇಕಾದವರು ದೆಹಲಿ, ಮುಂಬೈ ಅಥವಾ ಕಣ್ಣೂರು ಮೂಲಕ ಸ್ತುತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಈ ಸಮಸ್ಯೆಯನ್ನು ಮನಗಂಡು ನಾಔಉ ನಡೆಸಿದ ನಿರಂತರ ಪ್ರಯತ್ನ ಹಾಗು ಮನವಿಗೆ ಸ್ಪಂದಿಸಿ, ಮಾ.1ರಿಂದ ಈ ಸೇವೆಯನ್ನು ಪುನಾರಂಭಿಸಲು ಕ್ರಮಕೈಗೊಂಡ ಪ್ರಧಾಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಹಾಗು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪುಗೆ ಅಭಾರಿಯಾಗಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

