Site icon Ullalavani

ಉಳ್ಳಾಲ ಮಸೀದಿ ವಿರುದ್ಧ ಕಮೆಂಟ್ ಮಾಡಿದ ಆರೋಪಿ ಬಂಧನ…..!

ಉಳ್ಳಾಲ : “Support madi bro Ullal masjid hathira bomb blast madthini” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮಗಳ ಮಧ್ಯೆ ದ್ವೇಷ, ವೈಮನಸ್ಸು ಉಂಟುಮಾಡಿ ಹಿಂಸೆಗೆ ಪ್ರಚೋದನೆ ನೀಡಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.


ಪೊಲೀಸ್ ಮಾಹಿತಿ ಪ್ರಕಾರ, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿ ಸಾರ್ವಜನಿಕ ಶಾಂತಿ ಭದ್ರತೆಯನ್ನು ಹಾಳು ಮಾಡುವ ಉದ್ದೇಶದಿಂದ ಕಾಮೆಂಟ್ ಮಾಡಿದ್ದ ಹಿನ್ನೆಲೆ, ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 41/2026 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299, 353(2) ರಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತನನ್ನು ಉತ್ತರ ಕನ್ನಡ ಭಟ್ಕಳ, ನಿವಾಸಿ ಶಂಕರ್ ಮಸ್ತಪ್ಪ ಮೊಗೆರ್ (35) ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ನಗರದ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಧರ್ಮಗಳ ಮಧ್ಯೆ ದ್ವೇಷ ಹುಟ್ಟುಹಾಕುವ, ಹಿಂಸೆಗೆ ಪ್ರಚೋದನೆ ನೀಡುವಂತಹ ಕಾಮೆಂಟ್‌ಗಳು ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Exit mobile version