ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆ ನಡೆಯಿತು.

ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್ ನೇಮಕ ಮಾಡಿ ಕಾರ್ಯ ಪ್ರವೃತ್ತರಾಗಲು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಅಧ್ಯಕ್ಷೆ ಸಿಹಾನ ಬಿ ಎಂ, ಉಪಾಧ್ಯಕ್ಷೆ ದಾಕ್ಷಾಯಿಣಿ ಎಸ್ ಜಿ, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಸಂಘಟಕರಾದ ಅಶ್ವಿಜ ಶ್ರೀಧರ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು, ಚಿರಂತ್ ಸಚಿನ್ ಶ್ರವಣಬೆಳಗೊಳ ಉಪಸ್ಥಿತರಿದ್ದರು.

