Site icon Ullalavani

ಮಧ್ಯಪ್ರಾಚ್ಯ ಸಂಘರ್ಷ:ಮಂಗಳೂರಿನ ಡ್ರೈಫ್ರೂಟ್ಸ್ ವ್ಯಾಪಾರಕ್ಕೆ ಭಾರೀ ಹೊಡೆತ…!!

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ ಉದ್ಯಮಕ್ಕೂ ತಟ್ಟಿದ್ದು, ಮಂಗಳೂರಿನ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ.

ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರಬೇಕಿದ್ದ ಖರ್ಜೂರ ಸೇರಿದಂತೆ ಹಲವು ಒಣಹಣ್ಣುಗಳ ಪೂರೈಕೆ ಅಡಚಣೆಗೆ ಒಳಗಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಆರಂಭವಾಗಿದೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಭಾರತದ ಪ್ರಮುಖ ಡ್ರೈಫ್ರೂಟ್ಸ್ ಆಮದು ಸಂಸ್ಥೆಯಾದ ‘ರೀಮ್ ಟ್ರೇಡರ್ಸ್’ ಸೇರಿದಂತೆ ಹಲವು ವ್ಯಾಪಾರಿಗಳು ಈಗ ಸಂಕಷ್ಟ ಎದುರಿಸುತ್ತಿದ್ದಾರೆ.ಈ ಕಂಪನಿ ಮಂಗಳೂರಿನಿಂದ ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಗೋವಾ ಸೇರಿ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಡ್ರೈಫ್ರೂಟ್ಸ್ ಪೂರೈಸುತ್ತದೆ. ಕರ್ನಾಟಕದ ವಿವಿಧ ಕಡೆಗಳಿಗೂ ಇಲ್ಲಿಂದಲೇ ಡ್ರೈಫ್ರೂಟ್ಸ್ ಪೂರೈಕೆಯಾಗುತ್ತಿದೆ.ಯುದ್ಧ ಪರಿಸ್ಥಿತಿಯಿಂದಾಗಿ ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಡ್ರೈಫ್ರೂಟ್ಸ್ ಆಮದು ಅಸ್ತವ್ಯಸ್ತಗೊಂಡಿದೆ. ಇದರ ಪರಿಣಾಮವಾಗಿ ಖರ್ಜೂರ ಸೇರಿದಂತೆ ಅಂಜೀರ್, ಅಪ್ರಿಕಾಟ್, ಬಾದಾಮ್, ಕಪ್ಪು ದ್ರಾಕ್ಷಿ, ಫೈನ್ ನಟ್ಸ್ ಸೇರಿದಂತೆ ಹಲವು ಒಣಹಣ್ಣುಗಳ ಬೆಲೆಗಳು ಶೇ 15 ರಿಂದ 20 ರವರೆಗೆ ಏರಿಕೆ ಕಂಡಿವೆ.


ಸಾಮಾನ್ಯವಾಗಿ ಭಾರತಕ್ಕೆ ಆಮದು ಆಗುವ ಖರ್ಜೂರಗಳಲ್ಲಿ ಸುಮಾರು 60 ಶೇಕಡಾ ಪ್ರಮಾಣ ಇರಾನ್‌ನಿಂದಲೇ ಬರುತ್ತದೆ. ಆದರೆ ಇತ್ತೀಚಿನ ಯುದ್ಧ ಪರಿಸ್ಥಿತಿಯಿಂದಾಗಿ ಇರಾನ್‌ನಿಂದ ಬರುತ್ತಿದ್ದ ದೊಡ್ಡ ಪ್ರಮಾಣದ ಖರ್ಜೂರ ಪೂರೈಕೆ ಅಡಚಣೆಗೆ ಒಳಗಾಗಿದೆ.


Exit mobile version