ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತಲಪಾಡಿ: ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ `ಉಚಿತ ಸೈಕಲ್ ವಿತರಣೆ’ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ವಿಶೇಷ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು.
ತಲಪಾಡಿ ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷೆ ಜಯಲಕ್ಷ್ಮೀ ಸೀತಾರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರಕಾರದ ಸವಲತ್ತನ್ನು ಸದ್ವಿನಿಯೋಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಪ್ರಗತಿಯಾಗಲಿ ಎಂದು ಪೋಷಕರಿಗೆ ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್ .ಅಬ್ದುಲ್ ಖಾದರ್ ಕಡಬ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.


