ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್‌ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಕೆಲ ಮೂಲಗಳ ಪ್ರಕಾರ ಮಂಗಳೂರಿನಿAದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದುಬಂದಿದ್ದು, ಈ ಹಿನ್ನಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು, ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತಜ್ಞರ ತಂಡವು ಟ್ಯಾಂಕರ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುವಾಗ ಪರ್ಯಾಯ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

