ಉಳ್ಳಾಲ: ತಾಲೂಕಿನ ಕಾಪಿಕ್ಕಾಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ (ರಿ.) ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 5ರಿಂದ ಪ್ರಾರಂಭವಾಗುವ ಈ ಶಿಬಿರವು ಪ್ರತಿದಿನ ಸಂಜೆ 4.30ರಿಂದ 6 ಗಂಟೆಯವರೆಗೆ ನಡೆಯಲಿದೆ. ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳತ್ತ ಆಸಕ್ತಿ ಬೆಳೆಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯುವ ಪ್ರತಿಭೆಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಮುಂದುವರೆಯಲು ಅಗತ್ಯವಾದ ತರಬೇತಿಯನ್ನು ನೀಡಲಾಗುತ್ತದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳ ಪೋಷಕರು ತರಬೇತಿ ಆರಂಭಕ್ಕೂ ಮೊದಲು ಹೆಸರು ನೋಂದಾಯಿಸಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9035578198 ಸಂಖ್ಯೆಯನ್ನು ಸಂಪರ್ಕಿಸಬಹುದು.