Site icon Ullalavani

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ಕವಿಗೋಷ್ಠಿ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ರಚನಾತ್ಮಕವಾಗಿ ಚುಟುಕು ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡಿರುತ್ತದೆ.

7 ಬಾರಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಹಾಗೂ ಅಖಿಲ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಕಾಸರಗೋಡಿನಲ್ಲಿ ಸಂಘಟಿಸಿ ಮಹತ್ತರವಾದ ಸಾಹಿತ್ಯ ಸಂಘಟನೆಯನ್ನು ಯಶಸ್ವಿಯಾಗಿ ಪೂರೈಸಿರುತ್ತದೆ.
ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ. ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಕಾಸರಗೋಡು ಗೋ – ಕುಟೀರದಲ್ಲಿ 2026 ಮಾರ್ಚ್ 28 ಶನಿವಾರದಂದು ಅಪರಾಹ್ನ ಗಂಟೆ 2.30 ರಿಂದ 4.00 ರ ತನಕ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಬಹುಭಾಷಾ ಕವಿ ಗೋಷ್ಠಿ, ಚುಟುಕು ಕವಿಗೋಷ್ಠಿ ,ಮಕ್ಕಳ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ.
ಕಾಸರಗೋಡು ಜಿಲ್ಲೆಯ ಹಿರಿಯ, ಕಿರಿಯ ಕವಿ, ಕವಯತ್ರಿಯರು ತಮ್ಮ ಹೆಸರು, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ವಾಟ್ಸ್ ಪ್ ಮೂಲಕ ಕಳುಹಿಸಬೇಕು. ಚುಟುಕುಗಳು, ಕವನಗಳು, ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ.
ಭಾಗವಹಿಸಿದ ಕವಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.
ಶಿವರಾಮ ಕಾಸರಗೋಡು, ಅಧ್ಯಕ್ಷರು,ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ,ಕನ್ನಡ ಗ್ರಾಮ, ಕನ್ನಡ ಗ್ರಾಮರಸ್ತೆ, ಕಾಸರಗೋಡು-671121
ಮೊಬೈಲ್ :-9448572016

Exit mobile version