Site icon Ullalavani

ಮಾ.22ರಂದು ತೊಕ್ಕೊಟ್ಟುವಿನಲ್ಲಿ ಉಚಿತ ಕೈತೋಟ-ತಾರಸಿ ತೋಟ ತರಬೇತಿ

ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ.) ಮಂಗಳೂರು ಆಶ್ರಯದಲ್ಲಿ, ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಸಂಪೂರ್ಣ ಸಹಕಾರದೊಂದಿಗೆ ಉಚಿತ ಕೈತೋಟ ಹಾಗೂ ತಾರಸಿ ತೋಟ ತರಬೇತಿ, ಜೊತೆಗೆ ತರಕಾರಿ ಬೀಜ ಮತ್ತು ಸಸಿ ವಿತರಣೆ ಕಾರ್ಯಕ್ರಮ ಮಾರ್ಚ್ 22 ರಂದು ನಡೆಯಲಿದೆ.

ಈ ಕಾರ್ಯಕ್ರಮವು ತೊಕ್ಕೊಟ್ಟುವಿನ ಸ್ವಾಮಿ ಕೊರಗಜ್ಜ ಶಿವಾಜಿ ಸೇವಾ ಸಮಿತಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಘನ ಉಪಸ್ಥಿತಿ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಅವರು ಭಾಗವಹಿಸಲಿದ್ದಾರೆ.

ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಿರಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಡಾ. ಭಾರತಿ ನಿರ್ಮಲ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ. ದೊಡ್ಡಮನಿ,
ಜನ ಶಿಕ್ಷಣ ಟ್ರಸ್ಟ್ ಮುಡಿಪುವಿನ ಶೀನ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್, ಫುಡ್ ಚೈನ್ ಕ್ಯಾಂಪೇನ್ ಸಂಸ್ಥಾಪಕ ಯತೀಶ್ ತುಕಾರಾಮ್, ಶಿವಾಜಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಯು.ಹೆಚ್. ಅಲ್ತಾಫ್, ರಿಚಲ್ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸಿರಿಲ್ ರಾಬರ್ಟ್ ಡಿ’ಸೋಜ ಉಪಸ್ಥಿತರಿರುವರು.

ಸಂಪನ್ಮೂಲ ವ್ಯಕ್ತಿಗಳಾಗಿ ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳಾದ ಪ್ರದೀಪ್ ಡಿ’ಸೋಜ, ಪ್ರಮೋದ್ ಸಿ.ಎಂ, ಮತ್ತು ಪ್ರವೀಣ್ ಅವರು ತರಬೇತಿ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಫುಡ್ ಚೈನ್ ಕ್ಯಾಂಪೇನ್, ಶಿವಾಜಿ ಫ್ರೆಂಡ್ಸ್ ಸರ್ಕಲ್, ರಿಚಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರು ಆಟೋ ರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಹಕಾರ ನೀಡುತ್ತಿವೆ.

ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

Exit mobile version